
ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು ಆಯಾ ಧರ್ಮೀಯರು ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆಯಲ್ಲಿ ತೊಡಗಬೇಕು ಎಂದು ಸಿಪಿಐ ಮಹ್ಮದ್ ಫಸೀವುದ್ದೀನ ಹೇಳಿದರು.

ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಿಎಸ್‌ಐ ಸಂಜಯ ತಿಪರೆಡ್ಡಿ ಹೋಳಿ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಶಾಂತಿಪಾಲನಾ ಸಭೆಯಲ್ಲಿ ಅವರು ಮಾತನಾಡಿದರು. ಈಗ ಪರೀಕ್ಷೆಯ ಸಮಯವಾಗಿದ್ದು ವಿದ್ಯಾರ್ಥಿಗಳ ಮೇಲೆ ಬಲವಂತದಿAದ ಬಣ್ಣ ಎರಚಬೇಡಿ. ಇಷ್ಟಪಟ್ಟು ಬಣ್ಣದಾಟದಲ್ಲಿ ತೊಡಗಿಕೊಂಡವರನ್ನು ಹಬ್ಬದಲ್ಲಿ ತೊಡಿಸಿಕೊಳ್ಳಿ. ಒತ್ತಾಯಪೂರ್ವಕವಾಗಿ ಬಣ್ಣ ಹಚ್ಚುವುದು ಸರಿಯಲ್ಲ ಎಂದರು.
ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಬಣ್ಣದಾಟದ ನೆಪದಲ್ಲಿ ವಾಹನಗಳನ್ನು ತಡೆದು ಹಣ ವಸೂಲಿಗೆ ಇಳಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.ಹಿಂದೂ ಮುಸ್ಲಿಂ ಬಾಂಧವರು ಸೌಹಾರ್ದತೆಯಿಂದ ಹಬ್ಬದಾಚರಣೆಯಲ್ಲಿ ತೊಡಗಿಸಿಕೊಳ್ಳಿ ಎಂದರು.
ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ರಾಜಶೇಖರ ಹೊಳಿ, ರವೀಂದ್ರ ಬಿರಾದಾರ, ಪರಶುರಾಮ ನಾಲತವಾಡ ಮತ್ತಿತರರು ಮಾತನಾಡಿದರು. ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು,ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಇದ್ದರು.