ಮೃತ PSI ಪರಶುರಾಮ ಮನೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ,‌ ಮಾಧ್ಯಮಗಳಿಗೆ ನಿರ್ಬಂಧ! (ವಿಡಿಯೋ ನೋಡಿ)

ಮೃತ PSI ಪರಶುರಾಮ ಮನೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ,‌ ಮಾಧ್ಯಮಗಳಿಗೆ ನಿರ್ಬಂಧ! (ವಿಡಿಯೋ ನೋಡಿ)

ಕೊಪ್ಪಳ: ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ ಅವರ ಸ್ವಗ್ರಾಮ ಸೋಮನಾಳದಲ್ಲಿರುವ ಪರಶುರಾಮ ಮನೆಗೆ ಗೃಹ ಸಚಿವ ಪರಮೇಶ್ವರ ಭೇಟಿ ನೀಡಿದರು.

ಈ ಗೃಹ ಸಚಿವರು ಮನೆಯ ಒಳಗೆ ಹೋಗುತ್ತಿದ್ದಂತೆ ಪೊಲೀಸರು ಮಾಧ್ಯಮದವರಿಗೆ ಪ್ರವೇಶ ನಿರಾಕರಣೆ ಮಾಡಿ,‌ ಮನೆಯ ಬಾಗಿಲು ಹಾಕಿದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದಕ್ಕೂ ಮುನ್ನ ಮಾತನಾಡಿದ್ದ ಕುಟುಂಬಸ್ಥರು ಘೇರಾವ್ ಹಾಕುವ ಎಚ್ಚರಿಕೆ ನೀಡಿದ್ದರು. ಪರಶುರಾಮ್ ಸಾವಿಗೆ ಕಾರಣರಾದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಬಂಧನ ಮಾಡದೆ ಸಚಿವರು ತಮ್ಮ ಮನೆಗೆ ಬರೋದು ಬೇಡ. ಒಂದು ವೇಳೆ ಬಂಧಿಸದ ಬಂದರೆ, ಗೃಹ ಸಚಿವರಿಗೇ ಘೇರಾವ್ ಹಾಕ್ತಿವಿ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದರು.

ಪರಶುರಾಮ ಸಾವಿಗೆ ಕಾರಣವಾದವರನ್ನ ರಕ್ಷಣೆ ಮಾಡಿ ನಮಗೆ ಸಾಂತ್ವನ ಹೇಳೋದು ಬೇಡ. ಅವರನ್ನ ಬಂಧನ ಮಾಡಿ ನಮ್ಮ ಮನೆಗೆ ಬರೋದಾದ್ರೆ ಬರಲಿ. ಸಿಐಡಿ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿಬಿಐಗೆ ಪ್ರಕರಣ ನೀಡಬೇಕು. ನಾವು ಯಾರೂ ಸಿಬಿಐ ತನಿಖೆ ಮಾಡಿ ಅಂತ ಹೇಳಿಲ್ಲ‌ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ