liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು.

ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ ಮದ್ಯವೊಂದಕ್ಕೆ ಜನ ಫಿದಾ ಆಗಿದ್ದಾರೆ. ಅದು ಯಾವುದು ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ನಿರಂತರವಾಗಿ ಮದ್ಯ ಮತ್ತು ಬಿಯರ್ ಬೆಲೆ ಸಹ ಹೆಚ್ಚಾಗುತ್ತಲ್ಲೇ ಇದೆ. ಕರ್ನಾಟಕ ಸರ್ಕಾರವು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿದಾಗ, ಮದ್ಯ ಕಂಪನಿಗಳು ಹಾಗೂ ಮದ್ಯ ಪ್ರಿಯರಿಂದಲೂ ವಿರೋಧ ವ್ಯಕ್ತವಾಗುತ್ತಿತ್ತು. ಅಲ್ಲದೇ ಮದ್ಯದ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುವುದರಿಂದ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ. ಮದ್ಯದ ಬೆಲೆ ಹೆಚ್ಚಳದ ನಡುವೆಯೂ ವಿಸ್ಕಿ ಭರ್ಜರಿ ಮಾರಾಟವಾಗಿದ್ದು, ವಿಸ್ಕಿ ಮಾರಾಟದಲ್ಲಿ ಕರ್ನಾಟಕವು ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿಯೇ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಹೊಸ ದಾಖಲೆಯಾಗಿದೆ. ಇನ್ನು ಇದರಲ್ಲಿ ಶೇ.58ರಷ್ಟು ವಿಸ್ಕಿ ಮಾರಾಟವು ದಕ್ಷಿಣ ಭಾರತದ ಭಾಗದಲ್ಲೇ ಆಗಿದೆ. ಅಲ್ಲದೇ ಇದರಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ಹೇಳಲಾಗಿದೆ. ಸಿಐಎಬಿಸಿ (ಭಾರತೀಯ ಮದ್ಯ ಮಾರಾಟಗಾರರ ಒಕ್ಕೂಟ) ಅಂಕಿ-ಅಂಶವು ಈ ವಿಷಯವನ್ನು ಬಹಿರಂಗಪಡಿಸಿದೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಬಿಯರ್ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿಸ್ಕಿಗೂ ಬೇಡಿಕೆ ಹೆಚ್ಚಾಗಿದೆ. ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್ ವಿಸ್ಕಿ, ರಮ್, ಜಿನ್‌, ವೋಡ್ಕಾ, ಬ್ರಾಂಡಿ ಸೇರಿದಂತೆ ವಿವಿಧ ಮದ್ಯಗಳ ಮಾರಾಟದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಅಲ್ಲದೇ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ. ಮಾರ್ಚ್‌ 31ರ ಆರ್ಥಿಕ ವರ್ಷದಲ್ಲಿ ಅಂತ್ಯದ ವೇಳೆಗೆ ಈ ರಾಜ್ಯಗಳಲ್ಲಿ 23.18 ಕೋಟಿ ಬಾಕ್ಸ್ ವಿಸ್ಕಿ ಮಾರಾಟವಾಗಿದೆ. ಇನ್ನು ದೇಶದ ಉಳಿದ ರಾಜ್ಯಗಳು ಒಟ್ಟಾರೆ ಶೇ.42ರಷ್ಟು ಪಾಲು ಮಾರಾಟವಾಗಿದೆ ಎಂದು ಅಂಕಿ – ಅಂಶವು ಉಲ್ಲೇಖ ಮಾಡಿದೆ.

ದಕ್ಷಿಣದಲ್ಲೇ ಹೆಚ್ಚು:
ಇನ್ನು ವಿಸ್ಕಿ ಮಾರಾಟದಲ್ಲಿ ಕರ್ನಾಟಕವೇ ಪ್ರಥಮ ಸ್ಥಾನದಲ್ಲಿದ್ದಾರೆ. ದಕ್ಷಿಣ ಭಾರತದ ಐದು ರಾಜ್ಯಗಳು ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ 6.88 ಕೋಟಿ ಕೇಸ್‌(ಬಾಕ್ಸ್‌)ಗಳು ಮಾರಾಟವಾಗುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದಾದ ನಂತರದಲ್ಲಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ಸ್ಥಾನ ಪಡೆದಿವೆ. ಇನ್ನು ಮೊದಲ ಆರು ಸ್ಥಾನಗಳಲ್ಲಿ ದಕ್ಷಿಣ ಭಾರತದ ಪ್ರದೇಶಗಳೇ ಇವೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ