Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ