Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹುನಗುಂದ: ಇಲ್ಲಿನ ಬಸ್ ಘಟಕದಿಂದ ಹುನಗುಂದ-ಮ್ಯಾಗೇರಿ ಮಾರ್ಗದಲ್ಲಿ ಸರ್ಮಕವಾಗಿ ಹೆಚ್ಚಿನ ಬಸ್ ಸೌಲಭ್ಯೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳಿಂದ ಸೋಮವಾರ ಹುನಗುಂದ (hunagunda)ಬಸ್ ಘಟಕದ ವ್ಯವಸ್ಥಾಪಕ ಅರವಿಂದ ಭಜಂತ್ರಿಯವರಿಗೆ ಸೋಮವಾರ ಮನವಿ ನೀಡಿದರು.

Join Out Telegram: https://t.me/dcgkannada


ಕರವೇ ಕೂಡಲ ಸಂಗಮದ ಗ್ರಾಮ ಘಟಕದ ಅಧ್ಯಕ್ಷ ಸಂಜಯಗೌಡ ಗೌಡರ ಮಾತನಾಡಿ, ಕೂಡಲಸಂಗಮ ಸರ್ಕಾರಿ ಪೌಢಶಾಲೆಯಲ್ಲಿ ಒಟ್ಟು 528 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಬೇರೆ ಬೇರೆ ಹಳ್ಳಿಗಳಿಂದ ವಿದ್ಯಾರ್ಥಿಗಳು ನಿತ್ಯ ಕೂಡಲಸಂಗಮಕ್ಕೆ ಬರುತ್ತಿದ್ದು, ಬೆಳಿಗ್ಗೆ ಶಾಲೆಯ 10 ಗಂಟೆಗೆ ಆರಂಭವಾಗುತ್ತದೆ. ಸಾಯಂಕಾಲ 4:20 ಗಂಟೆಗೆ ಶಾಲೆಯು ಬಿಡುತ್ತಿರುವುದರಿಂದ ಈಗಾಗಲೇ ಒಂದು ಬಸ್ ಬರುತ್ತಿದ್ದು ಬೆಳಿಗ್ಗೆ ಮತ್ತು ಸಾಯಂಕಾಲ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಗೆ ಇರುವದರಿಂದ ಆದ್ದರಿಂದ ಇನ್ನೊಂದು ಹುನಗುಂದ-ಮ್ಯಾಗೇರಿ ಹೆಚ್ಚುವರಿ ಬಸ್ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಒಂದೇ ಬಸ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಂಚರಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಘಟಕ ವ್ಯವಸ್ಥಾಪಕರೇ ನೇರ ಹೊಣೆ. ಆದ್ದರಿಂದ ಕೂಡಲೇ ಹೆಚ್ಚುವರೆ ಬಸ್ ಬಿಡಬೇಕು. ಇಲ್ಲವಾದರೆ ಕರವೇ ಘಟಕದಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ತಾಲೂಕು ಕರವೇ ಘಟಕದ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ಕೂಡಲ ಸಂಗಮ ಗ್ರಾಮ ಘಟಕದ ಉಪಾಧ್ಯಕ್ಷ ಮಂಜು ವಡ್ಡರ, ಸೋಹಿಲ್ ಸುತಾರ, ಪ್ರವೀಣ ವಾಲೀಕಾರ, ರವಿ ಕೊಪ್ಪದ, ಸಂಗಮೇಶ ಗೌತಗಿ,ಕಿರಣ ವಡ್ಡರ, ದಶರಥ ವಡ್ಡ, ಸದ್ದಾಂ ಕಲಾಲ ಸೇರಿದಂತೆ ಇತರರು ಇದ್ದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು