Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ ಆಶೀರ್ವಚನ ನೀಡಿ ಮಾತನಾಡಿದರು.

ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಳ್ಳಲಿ. ವಿವಾಹ ಬಂಧನವೆಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದಾಗಿದೆ. ಆದ್ದರಿಂದ ನಿಮ್ಮ ಬದುಕು ಬಂಗಾರವಾಗಲಿ ಪ್ರಗತಿಯತ್ತ ಸಾಗಲು ಹಿರಿಯರ ಮಾರ್ಗದರ್ಶನ ಅವಶ್ಯಕವಾಗಿರುತ್ತದೆ. ಸೊಸೆಯಾದವರು ಅತ್ತೆ-ಮಾವನನ್ನು ತಂದೆ-ತಾಯಿಯಂತೆ ಕಾಣಬೇಕು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಂಡು ಹೋಗಬೇಕೆಂದು ತಿಳಿಸಿದರು.

ಚಳಗೇರಿಯ ವೀರಸಂಗಮೇಶ್ವರ ಸ್ವಾಮಿಗಳು ಮಾತನಾಡಿ ದಂಪತಿಗಳು ತಂದೆ-ತಾಯಿಗಳಲ್ಲಿ ದೇವರನ್ನು ಕಾಣಬೇಕು. ಮನೆಯ ಹಿರಿಯರನ್ನು ಗೌರವವನ್ನು ನೀಡಬೇಕು. ಅವರ ಮಾರ್ಗದರ್ಶನದಲ್ಲಿ ಜೀವನ ಸಾಗಿದರೆ ಜೀವನ ಸಾರ್ಥಕಗೊಳ್ಳುತ್ತದೆ. ಮಕ್ಕಳ ಮದುವೆ ಮಾಡಲು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ ಎಂದರು.

ಸಂಗಮೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿ 42 ವರ್ಷದಿಂದ ನಮ್ಮ ಕಮಿಟಿಯು ಉತ್ತಮವಾಗಿ ಜಾತ್ರೆಯನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದು, ಇವತ್ತು ತಾಲೂಕಿನ ಎಲ್ಲ ಸಮಾಜದ ದಾನಿಗಳ ಮತ್ತು ಭಕ್ತರ ಸಹಾಯದಿಂದ ಇಂತಹ ದೊಡ್ಡದಾದ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು ಮುಂದೆಯೂ ಇದೆ ರೀತಿಯಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಕಮಿಟಿಯೂ ಹೋಗುತ್ತದೆ ಎಂದು ತಿಳಿಸಿದರು.

ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠ, ವಿ.ಮ.ಬ್ಯಾಂಕ ಅಧ್ಯಕ್ಷ ಶಿವಾನಂದ ಕಂಠಿ, ನಿರ್ದೇಶಕ ರವಿ ಹುಚನೂರ, ದೇವು ಡಂಬಳ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ರೇವಡಿ, ಮುಸ್ಲಿಂ ಸಮಾಜದ ನೌಕರರ ಅಧ್ಯಕ್ಷ ನೂರಸಾಬ ರೋಣದ, ಪಿಎಸ್.ಐ ಚನ್ನಯ್ಯ ದೇವೂರ, ಸಂಗಮೇಶ್ವರ ದೇವಸ್ಥಾನ ಕಮಿಟಿಯ ಕಾರ್ಯದರ್ಶಿ ಅರುಣೋದಯ ದುದ್ಗಿ ಮಾತನಾಡಿದರು.

ಶ್ರೀ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ, ನೀಲಪ್ಪ ತಪೇಲಿ, ಬಾಬು ನಾಗರಾಳ, ತಿರುಪತಿ ಕುಷ್ಟಗಿ, ಅಶೋಕ ಪಟ್ಟಣಶೆಟ್ಟಿ, ಮಹಾಂತೇ ಶ್ಯಾವಿ, ಹನಮಂತಗೌಡ ಬೆನಕನಡೋಣ , ರಾಮನಗೌಡ ಬೆಳ್ಳಿಹಾಳ, ಗಿರಿಮಲ್ಲಪ್ಪ ಹಳಪೇಟಿ, ವಿರೇಶ ಅಂಗಡಿ, ನಾರಾಯಣ ಕುರಕುಂಟಾ, ಬಸವಪ್ಪ ವಂದಾಲಿ, ಮಲ್ಲಪ್ಪ ಅಂಠರದಾನಿ, ಈಶ್ವರಪ್ಪ ಹವಾಲ್ದಾರ, ಬಸವರಾಜ ಜಮಾದರ, ನಂದಪ್ಪ ಬಾರಕೇರ, ಅಡಿವೆಪ್ಪ ಅವಾರಿ, ಸೇರಿದಂತೆ ಇತರರಿದ್ದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸಾಮೂಹಿಕ ವಿವಾಹದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 16 ಇಷ್ಟಲಿಂಗ ಅಯ್ಯಾಚಾರ ಸಮಾರಂಭ ನಡೆಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು