Hunagund: Shivnagowda Jadiappa Gowda Chairman of Chikkaadapur to PLD Bank, Nagara Vice Chairman

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

Ad
Ad

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ ಅಧ್ಯಕ್ಷರಾಗಿ‌ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ್ರ, ಉಪಾಧ್ಯಕ್ಷರಾಗಿ ಪ್ರಭಾಕರ ಸಿದ್ರಾಮಪ್ಪ ನಾಗರಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.

ಪಿಎಲ್‌ಡಿ ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗಿದೆ.

Latest News

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು. ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ,

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.