ಹುಣಸಗಿ: ಪಟ್ಟಣ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಜರುಗಿತು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಅಧ್ಯಕ್ಷ ಸ್ಥಾನಕ್ಕೆ ತಿಪ್ಪಣ್ಣ ನಾಯಕ ಹಣಮನಾಯಕ ರಾಠೋಡ, ಉಪಾಧ್ಯಕ್ಷ ಸ್ಥಾನಕ್ಕೆ ಶಾಂತಪ್ಪ ನಂದಪ್ಪ ಮಲಗಲದಿನ್ನಿ ಅವರು ನಾಮಿನೇಷನ್ ಮಾಡಿದ್ದರು. ಇಬ್ಬರೇ ನಾಮಿನೇಷನ್ ಮಾಡಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ತಹಶೀಲ್ದಾರ್ ಬಸಲಿಂಗಪ್ಪ ನೈಕೋಡಿ ಅವರು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಿದ್ರಾಮೇಶ್ವರ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಹಾಗೂ ಶಾಸಕರು ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಹೂ ಗೂಚ್ಚ ನೀಡಿ ಸನ್ಮಾನಿಸಿ ಸ್ವಾಗತಿಸಿದರು.
ಇದನ್ನೂ ಓದಿ: ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಾದ ನಾಗಣ್ಣ ಸಾಹುಕಾರ ದಂಡಿನ, ಕೆ.ಪಿ.ಸಿ.ಸಿ ಸದಸ್ಯ ಸಿದ್ದಣ್ಣ ಮಲಗಲದಿನ್ನಿ, ಹುಣಸಗಿ ಬ್ಲಾಕ್ ಅಧ್ಯಕ್ಷ ಚಂದ್ರಶೇಖರ ದಂಡಿನ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಿದ್ರಾಮಪ್ಪ ಮುದಗಲ್, ಶರಣು ದಂಡಿನ್ ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದು ರೇವಡಿ ಸೇರಿದಂತೆ ಪಟ್ಟಣ ಪಂಚಾಯತ ನೂತನ ಸದಸ್ಯರು ಹಾಗೂ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.