ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು