ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಅವಧಿಯೊಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದಿದ್ದರೆ 15ನೇ ಹಣಕಾಸು ಆಯೋಗದ ಮೂಲಕ ರಾಜ್ಯಕ್ಕೆ ಬರಬೇಕಿರುವ 2100 ಕೋಟಿ ರೂಪಾಯಿ ಅನುದಾನ ಕೈತಪ್ಪಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಆತಂಕ ವ್ಯಕ್ತಪಡಿಸಿದ್ದಾರೆ.
ಆಯೋಗದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡೆಯಿಂದ ಕಳೆದ 4 ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಮುಂದಿನ ವರ್ಷದ ಮಾರ್ಚ್ ವೇಳೆಗೆ ಚುನಾವಣೆ ನಡೆಸದಿದ್ದರೆ 15ನೇ ಹಣಕಾಸು ಆಯೋಗದ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಿಂದ ಬರಬೇಕಾದ 2100 ಕೋಟಿ ರು. ಅನುದಾನ ಕಡಿತವಾಗಲಿದೆ. ಈ ಕುರಿತು ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
ಪಂಚಾಯಿ ಚುನಾವಣೆ, ಬಿಬಿಎಂಪಿ ಸಂಬಂಧ ಅರ್ಜಿಗಳು ಕೋರ್ಟಲ್ಲಿ ಇತ್ಯರ್ಥವಾಗಬೇಕಿದೆ.
ಇದನ್ನೂ ಓದಿ: ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ
ಸುಪ್ರೀಂಕೋರ್ಟ್ ಆದೇಶದಂತೆ ಹಾಲಿ ಇರುವ ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ಅನ್ವಯ ಚುನಾವಣೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಮುಂದಿನ ವಾರದಲ್ಲಿ ಚುನಾವಣೆ ಘೋಷಣೆ ಮಾಡಲಿದ್ದು, ನವೆಂ ಬರ್ ತಿಂಗಳ ಅಂತ್ಯದವೇಳೆ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು. ಚುನಾಯಿತ ಆಡಳಿತ ಬರಬೇಕು. ಇದು ಪ್ರಜಾಪ್ರಭುತ್ವದ ಹಕ್ಕು ಎಂದರು.