ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು