ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)

ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)


ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ತಾಂಡಾದಲ್ಲಿ ( Koluru tanda) ಶತಮಾನಗಳಿಂದ ವಾಸಿಸುತ್ತಿರುವ ನಿವಾಸಿಗಳಿಗೆ ವಾಸಿಸುತ್ತಿರುವ ಜಾಗೆಯ ಕುರಿತು ಗೊಂದಲ ಸೃಷ್ಟಿಸಿ ಅದರ ದುರ್ಲಾಭ ಪಡೆದುಕೊಳ್ಳಲು ಹಾಲಿ, ಮಾಜಿ ಶಾಸಕರ ಹೆಸರುಗಳನ್ನು ಬಳಸಿಕೊಂಡು ಕೆಲವು ಪುಢಾರಿಗಳು ವಸೂಲಿ ದಂಧೆಗೆ ಇಳಿದಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಆಗ್ರಹಿಸಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ತಾಂಡಾ ನಿವಾಸಿಗಳೊಂದಿಗೆ ಆಗಮಿಸಿದ್ದ ಅವರು ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ತಾಲ್ಲೂಕಿನ ಕೋಳೂರು ತಾಂಡಾ Koluru tanda) ನಿವಾಸಿಗಳು ತಾಂಡಾದ ಸರ್ವೆ ನಂ.167//3ಬ, 167//2, 167//1 , 169//* ರಲ್ಲಿನ ಮಾಲೀಕರುಗಳಿಗೆ ತಮ್ಮ ಸ್ವಂತ ಹಣವನ್ನು ಕೊಟ್ಟು ಅವತ್ತಿನ ಕಾಲದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈಚೇಗೆ ಸರ್ಕಾರದ ಸುತ್ತೋಲೆಯಂತೆ ನಮ್ಮ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದರ ದುರುಪಯೋಗವನ್ನು ಮೂಲ ಮಾಲೀಕರೂ ಹಾಗೂ ಮಧ್ಯವರ್ತಿಗಳು ಪಡೆದುಕೊಂಡು ಇಲ್ಲಿನ ನಿವಾಸಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಜೊತೆಗೆ ಇರುವ ಕೆಲವು ಪುಢಾರಿಗಳು ಈ ರೀತಿ ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದು ಜನಪ್ರತಿನಿಧಿಗಳ ಮುಖಕ್ಕೆ ಕಪ್ಪು ಮಸಿ ಬಳಿಯುವ ಕುತಂತ್ರವೂ ನಡೆದಿದೆ. ಇದಕ್ಕೆ ಹಾಲಿ, ಮಾಜಿ ಶಾಸಕರು ಆಸ್ಪದ ಕೊಡದೇ ಅಂತವರಿಗೆ ತಿಳಿವಳಿಕೆ ಹೇಳಬೇಕು ಎಂದು ಮನವಿ ಮಾಡಿದರು.

ಸರ್ಕಾರಕ್ಕೆ ಪುಕ್ಕಟೆಯಾಗಿ ಜಮೀನು ಕೊಟ್ಟಿದ್ದೇವೆ.ಅದಕ್ಕಾಗಿ ನಮಗೆ ಪರಿಹಾರ ಕೊಡಬೇಕು ಎಂದು ವಿನಾಕಾರಣ ಕೆಲವು ಪಟ್ಟಭದ್ರರು ಸರಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.ಅಧಿಕಾರಿಗಳಿಗೆ ಧಮಕಿ ಹಾಕಿ ತಮಗೆ ಸಂಬಂಧಪಡದ ಜಾಗೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸದರಿ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಡವರಿಗೆ ಅನ್ಯಾಯ ಆಗದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಇಂತಹ ದುರ್ಮಾರ್ಗದಿಂದ ಬಡವರಿಗೆ ತೊಂದರೆ ಕೊಡುವ ಕೆಲಸ ಮುಂದುವರೆದರೆ, ನಮ್ಮ ತಾಂಡಾವನ್ನು ಕಂದಾಯ ಗ್ರಾಮ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಮೂಲ ಮಾಲೀಕರಿಗೆ ಹಣ ಕೊಟ್ಟು ಜಮೀನು ಖರೀದಿ ಮಾಡಿದ್ದು ಅವರಿಗೆ ಯಾವುದೇ ರೀತಿಯ ಪರಿಹಾರವನ್ನು ನೀಡಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಿದರು.

ತಾಂಡಾದ ಪ್ರಮುಖರಾದ ಶಾಂತಾರಾಮ ಮೇಲ್ಮನಿ, ರಾಮಸ್ವಾಮಿ ಸೀತಿಮನಿ, ಪ್ರತಾಪ ಸೀತಿಮನಿ, ತುಳಜಾರಾಮ ಚವ್ಹಾಣ, ಸಯಭಾಷ ದಿಂಡೂರ, ಮುತ್ತು ಚವ್ಹಾಣ, ಪ್ರದೀಪ ರಾಠೋಡ, ವಿಕಾಸ ಚವ್ಹಾಣ, ಶಿವಾನಂದ ರಾಠೋಡ ಮೊದಲಾದವರು ಇದ್ದರು.

ಹಾಲಿ, ಮಾಜಿ ಶಾಸಕರು ರಾಜಕಾರಣ ಮಾಡುವಾಗ ರಾಜಕಾರಣ ಮಾಡಿ.ಬಡವರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯಕ್ಕೆ ಬನ್ನಿ. ಕೆಲವರು ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡುವುದು, ರೊಕ್ಕಾ ಎತ್ತುವುದು ಮಾಡುತ್ತಿದ್ದಾರೆ. ಅನವಶ್ಯಕವಾಗಿ ಬಡವರಿಗೆ ತೊಂದರೆ ಕೊಡುತ್ತಿರುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್