ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು