ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ: ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಅತ್ಯುತ್ಸಾಹ, ಸಂಭ್ರಮ, ಸಡಗರದ ೭೮ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವರುಣರಾಜನು ಹೂಮಳೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತು. ವೈಭವದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಪ್ರಭಾರಿ ಮುಖ್ಯಗುರುಮಾತೆ ವಿ ಬಿ ಕುಂಬಾರ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರರವರು ನೆರವೇರಿಸಿದರು.

Join Our Telegram: https://t.me/dcgkannada

ಶಾಲಾ ಮುಖ್ಯ ಗುರುಮಾತೆ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅನೇಕ ಮಹಾನ ಹೋರಾಟಗಾರರ ತ್ಯಾಗ, ಬಲಿದಾನ, ಅವರ ಕೊಡುಗೆ ಶ್ರೇಷ್ಠವಾದದ್ದು, ನಾವು ದೇಶಕ್ಕಾಗಿ ಯಾವುದೇ ಸೇವೆ ಮಾಡಲು ಸಿದ್ದರಾಗಿರಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸಾಧನೆಗೈಯುತ್ತ ದೇಶದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದರು. ಶಾಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುವಲ್ಲಿ ಎಸ್ ಡಿ ಎಂ ಸಿ ಹಾಗೂ ಗ್ರಾಮದ ನಾಗರಿಕರ ಸಹಕಾರ, ಸಹಾಯ ಬಹುಮುಖ್ಯ. ಶಾಲೆಗೆ ದಾನಿಗಳು ಕೊಡುಗೆಯನ್ನು ನೀಡುತ್ತಾ ಶಾಲೆಯ ಪ್ರಗತಿಗಾಗಿ ಸಹಕಾರ ನೀಡಿರುತ್ತಾರೆ ಎಂದು ಅವರಿಗೆ ಕೃತಜ್ಞತೆ, ಅಭಿನಂದನೆ ಸಲ್ಲಿಸಿದರು.

ಶಾಲೆಯ ವಿದ್ಯಾರ್ಥಿನಿಯರಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ಅನಿಸಿಕೆ ವ್ಯಕ್ತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಡುವುದರ ಮೂಲಕ ದಿನಾಚರಣೆಗೆ ಮೆರುಗು ತಂದರು. ನಲಿಕಲಿ ಮಕ್ಕಳು, ಉಳಿದ ತರಗತಿಯ ಮಕ್ಕಳ ಭಾಷಣ, ನೃತ್ಯವು ಕಾರ್ಯಕ್ರಮವನ್ನು ಸುಂದರಗೊಳಿಸಿತು.

ದೇ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರ, ಉಪಾಧ್ಯಕ್ಷರು ಶ್ರೀ ಸುಭಾಷಗೌಡ ರಾಯನಗೌಡ್ರು, ಶ್ರೀ ಮಾಬೂಸಾಬ ಮುಜಾವರ, ಶ್ರೀ ಶಿವಪ್ಪ ಕಟಾoಬ್ಳಿ, ಶ್ರೀ ವೀರಭದ್ರಯ್ಯ ಮಠ, ಶ್ರೀಮತಿನಂದಿತಾ ಗೌಡರ, ಶ್ರೀಮತಿ ದೇವಮ್ಮ ಭಜಂತ್ರಿ, ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಶ್ರೀ ಎಸ್ ವಿ ಬಲೂಳದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಗಂಗಾ, ಅತಿಥಿ ಶಿಕ್ಷಕಿಯರು, ಉರ್ದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ವಿದ್ಯಾರ್ಥಿನಿಯರು, ಪಾಲಕರು, ಪೋಷಕರು ನಂದವಾಡಗಿ ಗ್ರಾಮದ ಹಿರಿಯರು,ಯುವಕರು ಹಾಜರಿದ್ದರು.

ಇದನ್ನೂ ಓದಿ: Channapattana by election: ಇವರೆ ನೋಡಿ ಕಾಂಗ್ರೆಸ್ ಅಭ್ಯರ್ಥಿ…

ಕಾರ್ಯಕ್ರಮ ನಿರೂಪಣೆ ಬಸವರಾಜ ಬಲಕುಂದಿ, ವಿಶ್ವನಾಥ ತೋಟಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು, ಕುಮಾರಿ ಅಶ್ವಿನಿ ಕಪ್ಪರದ ವಂದಿಸಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ