
INDvsENG: ಟಾಸ್ ಸೋತ ಭಾರತ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಗುರದಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಇರಲ್ಲ.
ಟಾಸ್ ಸೋತ ಭಾರತ ಫೀಲ್ಡಿಂಗ್ ಮಾಡಬೇಕಿದೆ. ಆದರೆ, ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ ಬಂದಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗಾಯಗೊಂಡಿದ್ದರಿಂದ ಇಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಹಾರಾಷ್ಟ್ರದ ನಾಗುರದಲ್ಲಿ ಆರಂಭವಾಗಲಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಜೈಸ್ವಾಲ್ ಮತ್ತು ರಾಣಾ ಇಂದು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.