ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ಏನು ಮಾಡಬೇಕು?

ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ಏನು ಮಾಡಬೇಕು?

ಕೊಲೊಂಬೊ: ಶ್ರೀಲಂಕಾ ವಿರುದ್ಧ 27 ವರ್ಷದಲ್ಲಿ ಮೊದಲ ಬಾರಿಗೆ ಏಕದಿನ ಸರಣಿ ಸೋಲುವ ಭೀತಿಗೆ ಭಾರತ ತಂಡ ಸಿಲುಕಿದ್ದು, ಬುಧವಾರ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ.

ಕೋಚ್ ಆಗಿ ನೇಮಕಗೊಂಡ ಬಳಿಕ ಗೌತಮ್ ಗಂಭೀರ್ ಮೊದಲ ಏಕದಿನ ಸರಣಿ ಇದು. 2025ರ ಚಾಂಪಿಯನ್ ಟ್ರೋಫಿಗೆ ಆಟಗಾರರನ್ನು ಗುರುತಿಸಲು ಎದುರು ನೋಡುತ್ತಿರುವ ಅವರಿಗೆ ಇದು ಸಹಜವಾಗಿಯೇ ಉತ್ತಮ ಆರಂಭ ಎನಿಸಿಲ್ಲ. ಹೀಗಾಗಿ, 3ನೇ ಪಂದ್ಯದಲ್ಲಿ ತಂಡದಿಂದ ಸುಧಾರಿತ ಪ್ರದರ್ಶನವನ್ನು ಗಂಭೀರ್ ನಿರೀಕ್ಷೆ ಮಾಡುತ್ತಿದ್ದಾರೆ.

ಭಾರತ ಕೊನೆಯ ಬಾರಿಗೆ ಲಂಕಾ ವಿರುದ್ಧ ಏಕದಿನ ಸರಣಿ ಸೋತಿದ್ದು 1997ರಲ್ಲಿ. ಅರ್ಜುನ ರಣತುಂಗಾ ನೇತೃತ್ವದ ಲಂಕಾ ತಂಡ ಭಾರತವನ್ನು 0-3ರಲ್ಲಿ ಮಣಿಸಿತ್ತು. ಆ ಬಳಿಕ ಉಭಯ ತಂಡಗಳ ನಡುವೆ ಎರಡೂ ದೇಶಗಳಲ್ಲಿ ಒಟ್ಟು 13 ಏಕದಿನ ಸರಣೆಗಳು ನಡೆದಿದ್ದು, ಭಾರತ ಸೋತೇ ಇಲ್ಲ.

ಈ ಸರಣಿಯ ಮೊದಲ ಪಂದ್ಯ ಟ್ರೈ ಆದ ಬಳಿಕ, 2ನೇ ಪಂದ್ಯದಲ್ಲಿ ಭಾರತ 32 ರನ್‌ ಗಳಿಂದ ಸೋತಿತ್ತು. ಸರಣಿ ಸೋಲು ತಪ್ಪಿಸಲು ಈ ಪಂದ್ಯ ಗೆದ್ದು, ಸರಣಿ ಡ್ರಾ ಮಾಡಿಕೊಳ್ಳಲು ಒತ್ತಡದಲ್ಲಿ ರೋಹಿತ್ ಪಡೆ ಇದೆ. ಇದಕ್ಕಾಗಿ, ಭಾರತೀಯ ಬ್ಯಾಟರ್‌ಗಳ ಮೇಲೆ ಭಾರಿ ಒತ್ತಡ ಇದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು