Invitation to Gavisiddeshwar Sri for Kuntoji Basaveshwara First Maharathotsava

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಥಮ ಮಹಾರಥೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳ್ಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

ಕೊಪ್ಪಳಕ್ಕೆ ಶುಕ್ರವಾರ ಕಮೀಟಿ ಪದಾಧಿಕಾರಿಗಳು, ಗ್ರಾಮದ ಹಿರಿಯರೊಂದಿಗೆ ಪೂಜ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಈ ಮಾಹಿತಿ ನೀಡಿದರು.

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವ ಆಗಷ್ಟ 17 ರಂದು ಕಡೆಯ ಸೋಮುವಾರ ಜರುಗಲಿದೆ. ಜಾತ್ರಾಮಹೋತ್ಸವ ಸಮಾರಂಭ ಹಾಗೂ ರಥೋತ್ಸವಕ್ಕೆ ಚಾಲನೆ ನೀಡಲು ಪೂಜ್ಯರನ್ನು ಕೋರಿದಾಗ ಅವರು ಬರುವುದಾಗಿ ತಿಳಿಸಿದರು ಎಂದು ಹೇಳಿದರು.

ಶ್ರೀಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ದೇವಸ್ಥಾನ ಕಮೀಟಿಯ ಗೌರವ ಅಧ್ಯಕ್ಷ ನಾಗಲಿಂಗಯ್ಯ ಮಠ, ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೇಕಾರ, ರಾಮಣ್ಣ ಹುಲಗಣ್ಣಿ, ಬಸಲಿಂಗಪ್ಪ ಬಿರಾದಾರ, ಬಸವರಾಜ ಹುಲಗಣ್ಣಿ, ಮಲ್ಲಿಕಾರ್ಜುನ ಹುಲಬೆಂಚಿ, ಅಶೋಕ ಕಾಟಿ, ಕುಮಾರ ಹಡಪದ, ಮಂಜುನಾಥ ಅಬ್ಬಿಹಾಳಮಠ,ಪರಶುರಾಮ ತಳವಾರ , ಸಂಗಪ್ಪ ಜಾವುರ, ರೇವಣ್ಣಪ್ಪ ತಳವಾರ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು