ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮದ್ದೂರು ತಾಲೂಕಿನ ಸೋಮನಹಳ್ಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ , ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಮೂಡಾಗೆ ಸಂಬಂಧಿಸಿದ ಸುಳ್ಳುದಾಖಲೆ ಸೃಷ್ಟಿ ಮಾಡಿ 14 ಸೈಟ್ ಗಳನ್ನ ಪಡೆದುಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರು ರೈತ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಿನ್ನೆ ಕೆಂಗಲ್ ನಿಂದ ನಿಡಘಟ್ಟಕ್ಕೆ ಪಾದಯಾತ್ರೆ ಬಂದಿದ್ದೇವೆ.

ನಿನ್ನೆ ಪಕ್ಷದ ಕಾರ್ಯಕರ್ತೆ ಗೌರಮ್ಮ ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿರೋದು ಮನಸ್ಸಿಗೆ ನೋವಾಗಿದೆ. ಪಾದಯಾತ್ರೆಗೆ ಎರಡು ಪಕ್ಷದ ಕಾರ್ಯಕರ್ತರು ಪ್ರತಿದಿನ ನಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು ಹೆಜ್ಜೆ ಹಾಕುತ್ತಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ:
ಇನ್ನು ಯಾದಗಿರಿಯಲ್ಲಿ ಪಿಎಸ್ಐ ವರ್ಗಾವಣೆಗೆ 40 ಲಕ್ಷ ಹಣವನ್ನು ಶಾಸಕರು ಹಾಗೂ ಅವರ ಮಗನಿಂದ ಬೇಡಿಕೆ ಇಟ್ಟಿದ್ದರು. ಇದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಎಸ್ಐ ಪರಶುರಾಮ್ ಅವರ ಪತ್ನಿ ಜೊತೆ ಈಗಾಗಲೇ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೂರವಾಣಿ ಮೂಲಕ ಮಾತಾಡಿದ್ದಾರೆ. ಪಾದಯಾತ್ರೆ ಮುಗಿದ ಬಳಿಕ ಅವರಿಗೆ ನ್ಯಾಯ‌ ಕೊಡಿಸುವತ್ತ ಗಮನ ಹರಿಸುತ್ತೇವೆ.

ಅಹಿಂದ ಹಿಂದುಳಿದ ವರ್ಗದ ಸಹಕಾರದಿಂದ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ರೆ ಇವತ್ತು ಜನ ಅವರಿಗೆ ಛೀಮಾರಿ ಹಾಕ್ತಿದ್ದಾರೆ. ₹187 ಕೋಟಿ ವಾಲ್ಮೀಕಿ ನಿಗಮದಲ್ಲಿ ಅಕ್ರಮವಾಗಿದೆ. ಸಿಎಂ ಅವರಿಗೆ ನೈತಿಕತೆ ಇದ್ರೆ ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅಗ್ರಹಿಸಿದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು. ಕುಮಾರಸ್ವಾಮಿ ಅವರು ಸಿನಿಮಾ ಹಂಚಿಕೆದಾರರಾಗಿ ಅವರ ವೃತ್ತಿ ಜೀವನ ಆರಂಭ ಮಾಡಿದ್ರು, ಅದ್ರಲ್ಲಿ ಯಶಸ್ಸು ಕಂಡಿದ್ರು, ಇವತ್ತು ಆಸ್ತಿ ಬಗ್ಗೆ ಡಿಕೆ ಶಿವಕುಮಾರ್‌ ಅವರು ಮಾತಾಡುತ್ತಿದ್ದಾರೆ. ಇದೆಲ್ಲಾ ರಾಜ್ಯದ ಜನಕ್ಕೆ ಗೊತ್ತಿದೆ. ನಾವು ಬಿಳಿ ಹಾಳೆಯಿದ್ದ ಹಾಗೆ ಯಾವುದೇ ಮುಚ್ಚು ಮರೆ ಮಾಡಿಲ್ಲಾ‌. ಎನ್‌ಡಿಎ ಜೊತೆ ಮೈತ್ರಿಯಾದ ಬಳಿಕ 28 ಲೋಕಸಭೆಯ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರು ಹೊಂದಾಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಡಿ.ಸಿ ತಮ್ಮಣ್ಣ ನವರು, ಪುಟ್ಟರಾಜು ಅವರು, ಬಿಜೆಪಿ ಮಾಜಿ ಶಾಸಕ ಪಿ. ರಾಜೀವ್ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಅವರು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಜೊತೆಯಲಿದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ