Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ