Journalist Ashok Kalladka conferred with Karnataka Media Ratna Award

ಪತ್ರಕರ್ತ ಅಶೋಕ್ ಕಲ್ಲಡ್ಕಗೆ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ

ಪತ್ರಕರ್ತ ಅಶೋಕ್ ಕಲ್ಲಡ್ಕಗೆ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೀಡುವ ರಾಜ್ಯಮಟ್ಟದ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ಅಶೋಕ್ ಕಲ್ಲಡ್ಕ್ ಅವರು ಭಾಜನರಾಗಿದ್ದಾರೆ. ಪತ್ರಕರ್ತರಾದ ಕರ್ನಾಟಕ ಪ್ರಧಾನ ಸಂಪಾದಕ ಅಶೋಕ್ ಕಲ್ಲಡ್ಕ ಅವರನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಹಾಗೂ ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಮಾಧ್ಯಮ ಕ್ಷೇತ್ರದಲ್ಲಿ ಅಶೋಕ್ ಕಲ್ಲಡ್ಕ ಅವರು ನೀಡಿದ ಅನುಪಮ ಸೇವೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಸ್ಟಿಸ್ ಹೆಗ್ಡೆ ಅವರು, ಹಿಂದಿನ ಕಾಲದಲ್ಲಿ ಯಾರಾದರು ಅಪರಾಧವೆಸಗಿ ಜೈಲು ಸೇರಿದರೆ, ಊರಿನವರು ಅಪರಾಧಿಯ ಮನೆಯತ್ತ ಸುಳಿಯುತ್ತಿರಲಿಲ್ಲ. ತಪ್ಪು ಮಾಡಿದವನಿಗೆ ಮಾತ್ರ ಶಿಕ್ಷೆಯಲ್ಲದೆ ಅವರ ಕುಟುಂಬಕ್ಕೂ ಶಿಕ್ಷೆಯಾಗುತ್ತಿತ್ತು. ಹಾಗಾಗಿ ಜನರು ಅಪರಾಧವೆಸಗಲು ಹೆದರುತ್ತಿದ್ದರು. ಆದರೆ ಇಂದು ಬೇಲ್ ಮೇಲೆ ಹೊರಬಂದ ಆರೋಪಿಯನ್ನು ನಾವು ಮೆರವಣಿಗೆಯಲ್ಲಿ ಕರೆದುಕೊಂಡು ಬರುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

ಮನುಷ್ಯನಿಗೆ ತೃಪ್ತಿ ಮತ್ತು ಮಾನವೀಯತೆ ಈ ಎರಡು ಮೌಲ್ಯಗಳು ಇರಬೇಕು. ತೃಪ್ತಿ ಎಂಬುವುದು ಇಲ್ಲದಿರುವುದೇ ಭ್ರಷ್ಟಾಚಾರಕ್ಕೆ ಕಾರಣವಾಗಿದೆ. ನಾವು ಎಷ್ಟು ಕೂಡ ದುಡ್ಡು ಮಾಡಬಹುದು. ಆದರೆ ಅದು ನ್ಯಾಯಸಮ್ಮತವಾಗಿರಬೇಕು. ಇನ್ನೊಬ್ಬರ ಜೇಬಿಗೆ ಕೈಹಾಕಬಾರದು ಎಂದರು.
ಚಿತ್ರನಟ ಚೇತನ್ ಅಹಿಂಸಾ, ಮಾಜಿ ಸಚಿವ ರಾಮಚಂದ್ರ ಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಮುಂತಾದವರು ಉಪಸ್ಥಿತರಿದ್ದರು.

ವರದಿಗಾರ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ