Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ