ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ ಜಮೀನುಗಳಿಗೆ ಬಂಗಾರದ ಬೆಲೆ ಬರುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ತಾಲ್ಲೂಕಿನ ಕಂದಗನೂರ ಗ್ರಾಮದಿಂದ ಮುದೂರ ರಸ್ತೆ ಸುಧಾರಣೆ ಕಾಮಗಾರಿ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿದ್ದ ಕಂದಗನೂರ-ಮುದೂರ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ 50 ಲಕ್ಷ ರೂ.ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ರೈತರು ತಮ್ಮ ಹೊಲಗಳಿಂದ ನೇರವಾಗಿ ಮಾರುಕಟ್ಟೆಗೆ ಬೆಳೆದಿರುವ ಬೆಳೆ ಸಾಗಿಸಲು ಅನುಕೂಲಕ ಕಲ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಗ್ರಾಮೀಣ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡುತ್ತಿದೆ.ಗ್ರಾಮೀಣ ಭಾಗದಲ್ಲಿ ರಸ್ತೆ ಇಲ್ಲದ ಸಮಯದಲ್ಲಿ ಎಕರೆಗೆ 3-4 ಲಕ್ಷ ರೂ.ಕೇಳುತ್ತಿದ್ದ ಜಮೀನು ರಸ್ತೆ ಆದ ಬಳಿಕ 15-20 ಲಕ್ಷಕ್ಕೆ ಮಾರಾಟ ಆಗುತ್ತಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಮುಖಂಡರಾದ ಮಲ್ಲು ಅಪರಾಧಿ, ಪಂಚಾಯತ್ ಇಂಜಿನಿಯರಿAಗ್ ವಿಭಾಗದ ಎಇಇ ಶಿವರಾಜ ನಾಯಕ, ಎಇ ವಿಜಯಕುಮಾರ ನಾಯಕ, ಗುತ್ತಿಗೆದಾರ ರಾಜು ನಾಯಕ,ಲಕ್ಷö್ಮಣ ಲಮಾಣಿ,ಕಂದಗನೂರ,ಮುದೂರ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.







