This is the advertisement in the next CM newspaper

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿದ್ದರೂ ಈ ಹುದ್ದೆಗೆ ಟವೆಲ್ ಹಾಕುವ ರೇಸ್‌ನಲ್ಲಿ ಗುರುತಿಸಿಕೊಳ್ಳಲು ಹಲವು ನಾಯಕರು ಮುಂದಾಗಿದ್ದು, ರಾಜಕೀಯ ಕೋಲಾಹಲಕ್ಕೆ ಮುನ್ನುಡು ಬರೆದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಮೂಲಕ ಖಾಲಿ ಇಲ್ಲದ ಮುಖ್ಯಮಂತ್ರಿ ಹುದ್ದೆಗೆ ಹಲವು ನಾಯಕರಲ್ಲಿ ಆಸೆ ಗರಿಗೆದರಿರುವುದು ಸ್ಪಷ್ಟವಾಗಿದೆ.

ಸಿಎಂ ಬದಲಾವಣೆ ಇಲ್ಲ ಎಂಬುದು ಗೊತ್ತಿದ್ದರೂ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡುತ್ತಿರುವ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಡುವುದು ಮಾತ್ರವಲ್ಲದೇ, ಪರಸ್ಪರ ಪರೋಕ್ಷ ವಾಕ್ಸಮರ ಶುರುವಾಗಿರುವುದು ಪಕದ ಹೈಕಮಾಂಡ್‌ಗೆ ಇರುಸುಮುರುಸು ಉಂಟಾಗಿದೆ. ಎಂ.ಬಿ.ಪಾಟೀಲ್ ಅದರಲ್ಲಿಯೂ ಹಾಗೂ ಶಿವಾನಂದ ಪಾಟೀಲ್ ಅವರ ನಡುವೆ ನೇರಾನೇರ ವಾಕಮರ ಇದೀಗ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಮುಡಾ ನಿವೇಶನ ಹಂಚಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿದ್ದರೂ ಯಾವುದೇ ಕಾರಣಕ್ಕೂ ರಾಜೀನಾಮೆ ತೆಗೆದುಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಆದರೂ ಪಕ್ಷದ ಕೆಲ ನಾಯಕರು ತಾವೂ ಆಕಾಂಕ್ಷಿ ಎನ್ನುವ ಮಾತುಗಳನ್ನು ಹೇಳುತ್ತಿದ್ದಾರೆ.

ಈ ಹೇಳಿಕೆಗಳು ಪಕದ ಆಂತರಿಕ ಪಕ್ಷದ ವಲಯದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಪ್ರತಿಪಕ್ಷಗಳಿಗೆ ಪರೋಕ್ಷ ಸಹಾಯ ಮಾಡುತ್ತಿದೆ ಎಂದು ಪಕ್ಷದ ನಾಯಕರೇ ಹೇಳುತ್ತಿದ್ದಾರೆ.

ಭವಿಷ್ಯದ ಆಲೋಚನೆ:

ಮುಖ್ಯಮಂತ್ರಿ ಆಕಾಂಕ್ಷಿ ಎನ್ನುವ ಹೇಳಿಕೆ ನೀಡುತ್ತಿರುವ ಬಹುತೇಕ ನಾಯಕರು ಸಿದ್ದರಾಮಯ್ಯ ಅವರ ಬದಲಿಗೆ ತಮಗೆ ಸಿಎಂ ಹುದ್ದೆ ನೀಡಿ ಎನ್ನುವ ಮನಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿಲ್ಲ. ಬದಲಿಗೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ರೀತಿಯ ಹೇಳಿಕೆ ನೀಡುವ ಮೂಲಕ ‘ಸಿಎಂ ಗಾದಿ’ಗೆ ಟವೆಲ್ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ಇನ್ನು ಕೆಲವರಿಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿದ್ದರೂ ಈ ಕ್ಷಣದಲ್ಲಿ ಆ ಆಸೆ ಹೊರ ಹಾಕಿದರೆ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎನ್ನುವ ಆತಂಕ ದಿಂದ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ