ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿದ್ದರೂ ಈ ಹುದ್ದೆಗೆ ಟವೆಲ್ ಹಾಕುವ ರೇಸ್‌ನಲ್ಲಿ ಗುರುತಿಸಿಕೊಳ್ಳಲು ಹಲವು ನಾಯಕರು ಮುಂದಾಗಿದ್ದು, ರಾಜಕೀಯ ಕೋಲಾಹಲಕ್ಕೆ ಮುನ್ನುಡು ಬರೆದಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಈ ಮೂಲಕ ಖಾಲಿ ಇಲ್ಲದ ಮುಖ್ಯಮಂತ್ರಿ ಹುದ್ದೆಗೆ ಹಲವು ನಾಯಕರಲ್ಲಿ ಆಸೆ ಗರಿಗೆದರಿರುವುದು ಸ್ಪಷ್ಟವಾಗಿದೆ.
ಸಿಎಂ ಬದಲಾವಣೆ ಇಲ್ಲ ಎಂಬುದು ಗೊತ್ತಿದ್ದರೂ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡುತ್ತಿರುವ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಡುವುದು ಮಾತ್ರವಲ್ಲದೇ, ಪರಸ್ಪರ ಪರೋಕ್ಷ ವಾಕ್ಸಮರ ಶುರುವಾಗಿರುವುದು ಪಕದ ಹೈಕಮಾಂಡ್‌ಗೆ ಇರುಸುಮುರುಸು ಉಂಟಾಗಿದೆ. ಎಂ.ಬಿ.ಪಾಟೀಲ್ ಅದರಲ್ಲಿಯೂ ಹಾಗೂ ಶಿವಾನಂದ ಪಾಟೀಲ್ ಅವರ ನಡುವೆ ನೇರಾನೇರ ವಾಕಮರ ಇದೀಗ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.
ಮುಡಾ ನಿವೇಶನ ಹಂಚಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿದ್ದರೂ ಯಾವುದೇ ಕಾರಣಕ್ಕೂ ರಾಜೀನಾಮೆ ತೆಗೆದುಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಆದರೂ ಪಕ್ಷದ ಕೆಲ ನಾಯಕರು ತಾವೂ ಆಕಾಂಕ್ಷಿ ಎನ್ನುವ ಮಾತುಗಳನ್ನು ಹೇಳುತ್ತಿದ್ದಾರೆ.
ಈ ಹೇಳಿಕೆಗಳು ಪಕದ ಆಂತರಿಕ ಪಕ್ಷದ ವಲಯದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಪ್ರತಿಪಕ್ಷಗಳಿಗೆ ಪರೋಕ್ಷ ಸಹಾಯ ಮಾಡುತ್ತಿದೆ ಎಂದು ಪಕ್ಷದ ನಾಯಕರೇ ಹೇಳುತ್ತಿದ್ದಾರೆ.
ಭವಿಷ್ಯದ ಆಲೋಚನೆ:
ಮುಖ್ಯಮಂತ್ರಿ ಆಕಾಂಕ್ಷಿ ಎನ್ನುವ ಹೇಳಿಕೆ ನೀಡುತ್ತಿರುವ ಬಹುತೇಕ ನಾಯಕರು ಸಿದ್ದರಾಮಯ್ಯ ಅವರ ಬದಲಿಗೆ ತಮಗೆ ಸಿಎಂ ಹುದ್ದೆ ನೀಡಿ ಎನ್ನುವ ಮನಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿಲ್ಲ. ಬದಲಿಗೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ರೀತಿಯ ಹೇಳಿಕೆ ನೀಡುವ ಮೂಲಕ ‘ಸಿಎಂ ಗಾದಿ’ಗೆ ಟವೆಲ್ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?
ಇನ್ನು ಕೆಲವರಿಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿದ್ದರೂ ಈ ಕ್ಷಣದಲ್ಲಿ ಆ ಆಸೆ ಹೊರ ಹಾಕಿದರೆ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎನ್ನುವ ಆತಂಕ ದಿಂದ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.