ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಮುದ್ದೇಬಿಹಾಳ : 2047ರ ಹೊತ್ತಿಗೆ ‘ವಿಕಸಿತ ಭಾರತ’ವನ್ನು ನಿರ್ಮಿಸುವ ಬಿಜೆಪಿಯ ಸಂಕಲ್ಪಕ್ಕೆ ಈ ಬಜೆಟ್ ಭದ್ರ ಬುನಾದಿಯಾಗಿದ್ದು ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅದ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ವಿಷಯವಾಗಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಕೇಂದ್ರ ತೆರಿಗೆಗಳ ಹಂಚಿಕೆಯಲ್ಲಿ ಕರ್ನಾಟಕದ ಪಾಲು ಶೇ.3.64% ರಿಂದ 4.13% ಕ್ಕೆ ಏರಿಕೆಯಾಗಿದೆ.ಇದರಿಂದಾಗಿ ಪ್ರಸ್ತುತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಗಳ ಪಾಲಿನ ರೂಪದಲ್ಲಿ ₹63,049.58
ಕೋಟಿ ಹಂಚಿಕೆಯಾಗಲಿದೆ. ಕರ್ನಾಟಕದ ಹೈ-ಸ್ಪೀಡ್ ರೈಲು ಕಾರಿಡಾರ್ಗಳ ಸಂಪರ್ಕ
ದೇಶದಲ್ಲಿ ಪ್ರಸ್ತಾಪಿಸಲಾದ ಏಳು ಹೈ-ಸ್ಪೀಡ್ ರೈಲು ಕಾರಿಡಾರ್ಗಳಲ್ಲಿ ಕರ್ನಾಟಕಕ್ಕೆ ನೇರ ಪ್ರಯೋಜನ ನೀಡುವ ಎರಡು ಪ್ರಮುಖ ಮಾರ್ಗಗಳು ಹೈದರಾಬಾದ್ – ಬೆಂಗಳೂರು ಮತ್ತು ಚೆನ್ನೆöÊ – ಬೆಂಗಳೂರು ಘೋಷಿಸಲಾಗಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಬಜೆಟ್ ಬೆಂಬಲವಾಗಿ ₹500 ಕೋಟಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

2025–26 ಹಣಕಾಸು ವರ್ಷದಲ್ಲಿ ₹350 ಕೋಟಿ ಅನುದಾನ ನೀಡಲಾಗಿತ್ತು. ಈ ಹೆಚ್ಚುವರಿ ಅನುದಾನದಿಂದ ಬೆಂಗಳೂರಿನ ಮಧ್ಯಮವರ್ಗದ ಜನತೆಗೆ ಹೆಚ್ಚಿನ ಸೌಲಭ್ಯಗಳು ಹಾಗೂ ಸುಗಮ ಸಾರಿಗೆ ವ್ಯವಸ್ಥೆ ಲಭಿಸಲಿದೆ. ಉನ್ನತ ಮೌಲ್ಯದ ಕೃಷಿಗೆ ಉತ್ತೇಜನ ಕರ್ನಾಟಕದ ಹೆಮ್ಮೆಯಾದ ಶ್ರೀಗಂಧದ ಕೃಷಿಯನ್ನು ಉತ್ತೇಜಿಸಲು ಮತ್ತು ಅದರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲಿದೆ. ‘ತೆಂಗು ಪ್ರಚಾರ ಯೋಜನೆ’ಯನ್ನು ಘೋಷಿಸಲಾಗಿದೆ.ಭಾರತೀಯ ಗೋಡಂಬಿಯನ್ನು 2030ರ ವೇಳೆಗೆ ಜಾಗತಿಕ ಬ್ರಾಂಡ್ ಆಗಿ ಪರಿವರ್ತಿಸಲು ಮತ್ತು ಸಂಸ್ಕರಣಾ ಸಾಮರ್ಥ್ಯ ಹೆಚ್ಚಿಸಲು ವಿಶೇಷ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ಸೆಮಿಕಂಡಕ್ಟರ್ ಹಬ್‌ಗೆ ಬಲ ನೀಡಲು ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0’ಘೋಷಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಉತ್ಪಾದನಾ ಯೋಜನೆಗೆ 40,000 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ. ಜಾಗತಿಕ ಕ್ಲೌಡ್ ಸೇವೆ ನೀಡುವ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆ ನೀಡಿರುವುದು, ಬೆಂಗಳೂರಿನ ಐಟಿ ಉದ್ಯಮ ಮತ್ತು ಡಿಜಿಟಲ್ ಆರ್ಥಿಕತೆಗೆ ಭಾರಿ ಬೂಸ್ಟ್ ನೀಡಲಿದೆ.ಜೈವಿಕ ಔಷಧಿಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು 10,000 ಕೋಟಿ ರೂ.ಮೊತ್ತದ ಬಯೋ ಫಾರ್ಮಾಶಕ್ತಿ ಯೋಜನೆಯನ್ನು ಘೋಷಿಸಲಾಗಿದೆ. ಇದು ದೇಶದ ಬಯೋಟೆಕ್ ಹಬ್ ಆಗಿರುವ ಕರ್ನಾಟಕದ ಬಯೋಫಾರ್ಮಾ ಉದ್ಯಮಕ್ಕೆ ಭಾರಿ ಶಕ್ತಿ ನೀಡಲಿದೆ.ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ ವಿಮಾನದ ಬಿಡಿಭಾಗಗಳು, ಎಂಜಿನ್ ಮತ್ತು ಕಚ್ಚಾವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿರುವುದರಿಂದ ಏರೋಸ್ಪೇಸ್ ಕೇಂದ್ರವಾಗಿರುವ ಕರ್ನಾಟಕದ ಬೆಂಗಳೂರಿಗೆ ಲಾಭವಾಗಲಿದೆ ಎಂದು ತಿಳಿಸಿದರು.

‘ಸಿಟಿ ಎಕನಾಮಿಕ್ ರೀಜನ್’ ಯೋಜನೆಯನ್ನು ತರಲಾಗಿದ್ದು , ಪ್ರತಿ ಪ್ರದೇಶಕ್ಕೆ ಐದು ವರ್ಷ ಗಳ ಅವಧಿಗೆ 5,000 ಕೋಟಿ ರೂ.ಹÀಂಚಿಕೆ ಮಾಡಲಾಗಿದೆ.10 ಲಕ್ಷಕ್ಕೂ ಹೆಚ್ಚು ಮತ್ತು 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ವಿಶೇಷ ಮೂಲಸೌಕರ್ಯ ಬೆಂಬಲ ನೀಡಲಾಗುತ್ತಿದ್ದು , ಕರ್ನಾಟಕದ ಪ್ರಮುಖ ನಗರಗಳು ಈ ಯೋಜನೆಗಳಡಿ ಆಧುನಿಕ ಸೌಲಭ್ಯಗಳನ್ನು ಪಡೆಯಲಿವೆ ಎಂದು ಮಾಹಿತಿ ನೀಡಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,