Karnataka Platform-Based Gig Workers Social Security and Welfare Development Bill 2025 Passed in Legislative Council

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ

ಬೆಂಗಳೂರು, ಆಗಸ್ಟ್‌ 20: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕಕ್ಕೆ ಬುಧವಾರ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ ದೊರೆಯಿತು. ಮಂಗಳವಾರ ಈ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿತ್ತು.

ವಿಧೇಯಕವನ್ನು ಪರ್ಯಾವಲೋಚನೆಗೆ ಮಂಡಿಸಿ ಮಾತನಾಡಿದ ಸಚಿವ ಸಂತೋಷ್‌ ಎಸ್‌ ಲಾಡ್ ಅವರು, ಗಿಗ್‌ ಕಾರ್ಮಿಕರು ಎಂದರೆ ಯಾರು, ವಿಧೇಯಕದ ಪ್ರಮುಖ ಅಂಶಗಳು, ಮಂಡಳಿ ರಚನೆ, ಕಾರ್ಮಿಕರಿಗೆ ಸಾಮಾಜಿಕ ಸೇವಾ ಸೌಲಭ್ಯ ಕಲ್ಪಿಸಲು ಬೇಕಾದ ನಿಧಿಗೆ ಸೆಸ್‌ ಸಂಗ್ರಹ ಮತ್ತಿತರ ಅಂಶಗಳನ್ನು ಸದನಕ್ಕೆ ವಿವರಿಸಿದರು.

ಪ್ರಶಂಸೆ ವ್ಯಕ್ತಪಡಿಸಿದ ಸದಸ್ಯರು: ವಿಧೇಯಕದ ಕುರಿತು ಮಾತನಾಡಿದ ಹಲವು ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು. ಇದೊಂದು ಐತಿಹಾಸಿಕ ಮಸೂದೆ. ಸರ್ಕಾರ ಒಳ್ಳೆಯ ಕ್ರಮಕ್ಕೆ ಮುಂದಾಗಿದೆ ಎಂದರು.

ಸದಸ್ಯರಾದ ಐವನ್‌ ಡಿಸೋಜ, ಎಚ್‌ ವಿಶ್ವನಾಥ್‌, ಸಿ ಟಿ ರವಿ, ಕೆ ಎಸ್‌ ನವೀನ್‌. ಡಿ ಎಸ್‌ ಅರುಣ್‌, ಪ್ರತಾಪ್‌ ಸಿಂಹ ನಾಯಕ್‌, ಎನ್‌ ರವಿ ಕುಮಾರ್‌ ಹಾಗೂ ಟಿ ಎ ಶರವಣ ಅವರು ಮಾತನಾಡಿದರು.

ಕಾನೂನಿನ ಹಾದಿ ಸುಗಮ: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕವು ವಿಧಾನ ಮಂಡಲದ ಉಭಯ ಸದನದಲ್ಲಿ ಅಂಗೀಕಾರಗೊಂಡಿರುವುದರಿಂದ ಕಾನೂನಿ ಹಾದಿ ಸುಗಮವಾಗಿದೆ. ಇದರೊಂದಿಗೆ ಕಾರ್ಮಿಕ ಇಲಾಖೆಯ ಮಹತ್ವದ ಮತ್ತೊಂದು ಕ್ರಮ ಜಾರಿಯಾಗಲಿದೆ. ಲಕ್ಷಾಂತರ ಗಿಗ್‌ ಕಾರ್ಮಿಕರ ಹಿತ ಕಾಪಾಡುವಲ್ಲಿ ಈ ಮಸೂದೆಯೂ ಮಹತ್ವದ ಪಾತ್ರ ವಹಿಸಲಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು