ಬೆಂಗಳೂರು : ಮೂಡಾ ಹಗರಣ (Muda Case)ದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ( Siddaramaiah) ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಕೂಡ ಪ್ರತಿಭಟನೆ ನಡೆಸುವ ರಾಜ್ಯದಲ್ಲಿ ರಾಜಕೀಯ (Karnataka politics)ದಲ್ಲಿ ದೊಂಬರಾಟಕ್ಕೆ ಸಾಕ್ಷಿಯಾಗಲಿದೆ.
Join Our Telegram: https://t.me/dcgkannada
ಮೂರು ಪಕ್ಷಗಳ ಪ್ರತಿಭಟನೆಯಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಗಳಿವೆ. ಸಾರ್ವಜನಿಕರು ಎಚ್ಚರಿಕೆ ಇರಬೇಕಾದ ಅನಿವಾರ್ಯತೆ ಉಂಟಾಗಿದೆ.
ಶನಿವಾರ ರಾಜಭವನದಿಂದ ಥಾವರ್ ಚಂದ್ ಗೆಹೋಟ್ ಅವರ ಆದೇಶ ಹೊರಬೀಳುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ತಲ್ಲಣಕ್ಕೆ (Karnataka politics) ಕಾರವಾಗಿತ್ತು. ಸ್ವತಃ ಗೃಹಸಚಿವ ಪರಮೇಶ್ವರ್ ಅವರೇ, ಸರ್ಕಾರ ಅಲುಗಾಡುತ್ತಿರುವುದು ನಿಜ ಎಂದು ಒಪ್ಪಿ ಹೇಳಿಕೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಪರವಾಗಿ ರಾಜ್ಯಾದ್ಯಂತ ಹಲವು ಸಂಘಟನೆಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ದ ತನಿಖೆಗೆ ತಮ್ಮ ಪಾದಯಾತ್ರೆಯೇ ಕಾರಣ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಸಹ ಇಂದು ಗಾಂಧಿ ಪ್ರತಿಮೆಯ ಎದುರು ಸಿಎಂ ರಾಜೀನಾಮೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಲಿದೆ.
ಇದನ್ನೂ ಓದಿ: Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!
ನಗರದ ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.