ಬೆಂಗಳೂರು: ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.