ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಇಂದು ಹೇಳಿದ್ದಾರೆ.
ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದಿದ್ದಾರೆ ಕೇಂದ್ರ ಸಚಿವರು.
Join Our Telegram: https://t.me/dcgkannada
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ
ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ರಾಜ್ಯ ಸರಕಾರ ಹಾಗೂ ಕೆಪಿಎಸ್ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಅವರು ಆಗ್ರಹಪಡಿಸಿದ್ದಾರೆ.