ಮುದ್ದೇಬಿಹಾಳ: ಐದನೇ ಹೆಚ್ಚುವರಿ ಮತ್ತು ಸತ್ರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸಚೀನ ಕೌಶಿಕ ಅವರ ಬಾಡಿಗೆ ಮನೆಯಲ್ಲಿ ಸೋಮವಾರ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಮುದ್ದೇಬಿಹಾಳ ಪಟ್ಟಣದ ಹುಡ್ಕೋದ 14 ನೇ ಕ್ರಾಸನಲ್ಲಿರುವ ಜಿಲ್ಲಾ ನ್ಯಾಯಾಧೀಶರಿದ್ದ ಮನೆ ಕಳ್ಳತನ ಮಾಡಲಾಗಿದೆ. ನ್ಯಾಯಾಧೀಶರು ಊರಿಗೆ ಹೋದ ಸಮಯದಲ್ಲಿ ಈ ಘಟನೆ ನಡೆದಿದ್ದು ಮನೆಯ ಮುಂಬಾಗಲಿನ ಬೀಗವನ್ನು ಮುರಿಯದೇ ಬಾಗಿಲು ತೆರೆದಿರವುದು ಪೊಲೀಸರಿಗೆ ಸವಾಲಾಗಿದೆ.
ಘಟನೆಯ ವಿಷಯ ತಿಳಿಯುತ್ತದ್ದಂತೆ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ,ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್ಐ ಸಂಜಯ ತಿಪರೆಡ್ಡಿ ಭೇಟ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುದ್ದೇಬಿಹಾಳದ ಸಿವ್ಹಿಲ್ ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ, ರಾಮಮೂರ್ತಿ ಎನ್, ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ರಿ, ಭೇಟಿ ಮಾಡಿ ಘಟನೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಬೆರಳಚ್ಚು ಹಾಗೂ ಶ್ವಾನದಳ ತಂಡ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ಈವರೆಗೂ ದಾಖಲಾಗಿಲ್ಲ. ನ್ಯಾಯಾಧೀಶರು ಆಗಮಿಸಿದ ಬಳಿಕ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.