Kodimathada shree: Swamiji of Kodimath who made explosive predictions

Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

ಹಾಸನ: ಕೋಡಿಮಠದ ಶ್ರೀಗಳು (Kodi Mutt Swamiji) ಮತ್ತೆ ಸ್ಫೋಟಕ ಭವಿಷ್ಯವನ್ನು ನುಡಿದಿದ್ದು, ಸಾರ್ವಜನಿಕ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಮಳೆಯಿಂದ ಜಾಸ್ತಿ ತೊಂದರೆ ಇದೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆಯು ರೈತಾಪಿ ವರ್ಗವನ್ನು ಆತಂಕಕ್ಕೆ ದೂಡಿದೆ.

ಅಲ್ಲದೆ, ಪ್ರಾಕೃತಿಕ ದೋಷ ಇದ್ದು, ಐದು ಕಡೆಯೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಹೀಗೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಒಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ ಎಂದು ಹೇಳಿರುವುದು ಭಯವನ್ನುಂಟು ಮಾಡಿದೆ.

ಈ ಹಿಂದೆ ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ. ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಮುಳುಗುತ್ತವೆ ಅಂತಲೂ ಹೇಳಿದ್ದೆ ಎಂದು ಸ್ಮರಿಸಿದರು.

ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಇವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್‌ ಮಾಡಿಸಿದ್ದರು ಎಂದಿದ್ದಾರೆ‌ ಕೋಡಿ ಶ್ರೀ.

ಇದನ್ನೂ ಓದಿ: ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಮಹಾಭಾರತದಲ್ಲಿ ಕೃಷ್ಣ ಗೆದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಅದರ ಅರ್ಥ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಇದೆ ಆಗುವುದು ಎಂದು ಭವಿಷ್ಯ ನುಡಿದಿದ್ದು, ರಾಜಕೀಯ ಸ್ಥಾನಪಲ್ಲಟದ ಸಂಕೇತ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ‌.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ