ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.





