Krishna river water should be provided for drinking and village problems solved: Ambedkar Sena insists

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆ
ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ ಕೆಲಸ ಮಾಡಿದರು. ಆರೋಗ್ಯ ಇಲಾಖೆಯವರು ಬೋರವೆಲ್ ನೀರು ಕುಡಿಯಲು ಯೋಗ್ಯವಿಲ್ಲ. ಅದರಿಂದ ಅನಾರೋಗ್ಯಕೆ ಕಾರಣವಾಗಿದೆ ಎಂದು ಹೇಳಿದರು.

ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯ ಭಾಧಿತರಾಗಿದ್ದಾರೆ. ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ.

ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿರಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.

ಜೆಜೆಎಮ್ ಮೂಲಕ ಕೋರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ. ಕಾಮಗಾರಿಯು ಕಳಪೆಯಾಗಿದ್ದು, ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹಾಳಾಗಿ ನೀರು ಪೋಲಾಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇವೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ, ಅನಿಲ್ ಕುಮಾರ್, ಅಮರೇಶ ಆನೇಹೂಸೂರು ಉಪಸ್ಥಿತರಿದ್ದರು.

ವರದಿಗಾರ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ