
ಮುದ್ದೇಬಿಹಾಳ : ಘಟಕದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿರುವ ಘಟನೆ ತಾಲ್ಲೂಕಿನ ಗೆದ್ದಲಮರಿ ತಾಂಡಾ ಬಳಿ ಬುಧವಾರ ನಡೆದಿದೆ.

ಬಾಗಲಕೋಟ ಘಟಕಕ್ಕೆ ಸೇರಿದ ಈ ಬಸ್‌ನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದರಲ್ಲಿ ದೇವೂರು ಗ್ರಾಮದ ಈರಮ್ಮ ಕಂಬಾರ(42), ಸಂಗೀತಾ ಕಂಬಾರ(26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟ ಆಸ್ಪತ್ರೆಗೆ ಕಳಿಸಲಾಗಿದೆ. ಚಾಲಕ, ನಿರ್ವಾಹಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಮಾಹಿತಿ ನೀಡಿದ ಪಿಎಸ್‌ಐ ಸಂಜಯ ತಿಪರೆಡ್ಡಿ, ಸಾರಿಗೆ ಘಟಕ ವ್ಯವಸ್ಥಾಪಕ ಎ. ಎಚ್. ಮದಭಾವಿ ಬಸ್ ಚಾಲಕ ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧೆಗೆ ಬಸ್ ಹಾಯಿವುದರಿಂದ ಬಚಾವ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.