Labor Minister Santosh Lad has demanded a separate fund for backward class youth industrialists

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರಿಗೆ ಪತ್ರ

ಬೆಂಗಳೂರು, ಜುಲೈ 30: ಹಿಂದುಳಿದ ವರ್ಗದ ಉದಯೋನ್ಮುಖ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಮೀಸಲಾದ ಪ್ರತ್ಯೇಕ ನಿಧಿ (Fund of fund) ಸ್ಥಾಪಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಹಿಂದುಳಿದ ವರ್ಗ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.

ಅನುದಾನ ಕ್ರೋಡೀಕರಣ ಹೇಗೆ?
ಪ್ರತ್ಯೇಕ ನಿಧಿಗೆ ಅನುದಾನ ಕ್ರೋಡೀಕರಿಸುವ ಸಂಬಂಧ ತಮ್ಮ ಪತ್ರದಲ್ಲಿ ವಿವರಿಸಿರುವ ಸಚಿವರು, ಈ ನಿಧಿಗೆ ಸರ್ಕಾರದಿಂದ ಅನುದಾನ ಒದಗಿಸುವುದು, ಖಾಸಗಿ ವಲಯದ ವಿವಿಧ ರೀತಿಯ ಹೂಡಿಕೆದಾರರಿಂದ ಹೂಡಿಕೆಗೆ ಅವಕಾಶ ಮಾಡಿಕೊಡಬಹುದಾಗಿದೆ ಎಂದು ಹೇಳಿದ್ದಾರೆ.

ನವೋದ್ಯಮ ಸ್ಥಾಪನೆಗೆ ಅವಕಾಶ
ಈ ಪ್ರತ್ಯೇಕ ನಿಧಿಯಿಂದ, ಸರ್ಕಾರ ಮತ್ತು ಖಾಸಗಿ ವಲಯದ ಹೂಡಿಕೆದಾರರು ಅಂತಿಮಗೊಳಿಸುವ ಯುವ ಹಿಂದುಳಿದ ವರ್ಗಗಗಳಿಗೆ ನವೋದ್ಯಮ (start up) ಗಳನ್ನು ಆರಂಭಿಸಲು ಅನುದಾನ ಒದಗಿಸಬಹುದು. ಇದರಿಂದ ಹಿಂದುಳಿದ ವರ್ಗದ ಉದ್ಯಮಿಮಗಳು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲಿದ್ದಾರೆ ಎಂಬ ಆಶಾಭಾವನೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು