ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪರೀಕ್ಷೆಗೆ ಕೂತಿದ್ದ ಒಟ್ಟು 1073 ವಿದ್ಯಾರ್ಥಿಗಳಲ್ಲಿ 900 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಪಾಸಾಗಿದ್ದು 166 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಒಟ್ಟಾರೆ ಕಾಲೇಜಿನ ಫಲಿತಾಂಶ ಶೇ.99.53 ರಷ್ಟಾಗಿದೆ.ಗಣಿತದಲ್ಲಿ 418, ಬಯೋಲಜಿಯಲ್ಲಿ 70, ಫಿಸಿಕ್ಸನಲ್ಲಿ 72,ಕಂಪ್ಯೂಟರ್ ಸೈನ್ಸ್ನಲ್ಲಿ 10,ಕನ್ನಡದಲ್ಲಿ 3,ಹಿಂದಿಯಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿಗಳಾದ ಅಮೀತಗೌಡ ಪಾಟೀಲ, ದರ್ಶನಗೌಡ ಪಾಟೀಲ,ಮುಖ್ಯವ್ಯವಸ್ಥಾಪಕ ವಿಜಯಕುಮಾರ ಪಾಟೀಲ,ಪ್ರಾಚಾರ್ಯ ಇಸ್ಮಾಯಿಲ್ ಮನಿಯಾರ್, ಶಿಕ್ಷಕರಾದ ರಾಜಶೇಖರ ಹಿರೇಮಠ,ರೇವಣಸಿದ್ದ ಮುರಾಳ ಮತ್ತಿತರರು ಅಭಿನಂದಿಸಿದ್ದಾರೆ.







