Murder Case Image of murder symbol

ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!

ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!

ಹೊಸಕೋಟೆ; ಜಮೀನು ವಿಚಾರಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ದಬ್ಬಗುಂಟಹಳ್ಳಿಯ ಗೋವಿಂದಪ್ಪ (53 ವರ್ಷ) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಮಂಜುನಾಥ್ (42 ವರ್ಷ) ಕೊಲೆ ಮಾಡಿದ ಆರೋಪಿ.

ಕೊಲೆಯಾದ ಗೋವಿಂದಪ್ಪನಿಗೆ ಮಂಜುನಾಥ್ ಬಾಮೈ ದನಾಗಬೇಕು. 20 ಗುಂಟೆ ಜಮೀನು ವಿಚಾರಕ್ಕೆ ಇಬ್ಬರೂ ಆಗಾಗ್ಗೆ ಜಗಳ ಮಾಡಿ ಕೊಳ್ಳುತ್ತಿದ್ದರು. ಗ್ರಾಮಸ್ಥರು ಜಗಳವನ್ನು ತಿಳಿಗೊಳಿಸುತ್ತಿದ್ದರು.

ಆದರೆ ಮಂಗಳವಾರ ಬೆಳಿಗ್ಗೆ ಗೋವಿಂದಪ್ಪ ಜಮೀನಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಂಜುನಾಥ್ ಗೋವಿಂದಪ್ಪನನ್ನು ಅಡ್ಡಗಟ್ಟಿ ಜಗಳ ತೆಗೆದ ಸಂದರ್ಭದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್ ದೊಣ್ಣೆಯಿಂದ ಬಲವಾಗಿ ಗೋವಿಂದಪ್ಪ ಅವರ ತಲೆಗೆ ಬಾರಿಸಿದ್ದಾರೆ. ಈ ವೇಳೆ ತಲೆಗೆ ಭಾರಿ ಪೆಟ್ಟಾಗಿ ಅಧಿಕ ರಕ್ತಸ್ರಾವವಾಗಿದ್ದ ಗೋವಿಂದಪ್ಪರನ್ನು ಸ್ಥಳೀಯರು ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ದಾಖಲಿಸಿದರೂ ಗೋವಿಂದಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಡಿವೈ ಎಸ್ಪಿ ಅಣ್ಣಾಸಾಹೇಬ್ ಪಾಟೀಲ್, ಪಿಐ ಅಶೋಕ್ ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಕೊಲೆ ಮಾಡಿದ ಆರೋಪಿ ಮಂಜುನಾಥ್‌ರನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಎಸ್ಪಿ ಭೇಟಿ, ಪರಿಶೀಲನೆ: ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, ಎಎಸ್ಪಿ ನಾಗೇಶ್ ಕುಮಾರ್‌ ದಬ್ಬಗುಂಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕೊಲೆ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದರು.

ಡಿವೈಎಸ್ಪಿ ಅಣ್ಣ ಸಾಹೇಬ್ ಪಾಟೀಲ್ ಅವರಿಂದ ಮಾಹಿತಿಯನ್ನು ಪಡೆದರು. ಬೆರಳಚ್ಚು ತಜ್ಞರು ಭೇಟಿ ನೀಡಿ ಅಗತ್ಯವಾದ ಮಾಹಿತಿಯನ್ನು ಸಂಗ್ರಹಿಸಿದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ