ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿದ್ದು, ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದೆ.

ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ