ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ ಒಂದು ಅಂಬ್ಯುಲೆನ್ಸ್ ಜನಸೇವೆಗೆ ಅರ್ಪಿಸಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ದ್ಯಾಮವ್ವನ ಕಟ್ಟೆ ಬಳಿ ಶುಕ್ರವಾರ ಕೆಎಸ್‌ಡಿಎಲ್‌ನಿಂದ ವಿತರಿಸಲಾದ ಎರಡು ಅಂಬ್ಯುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಿ ಮಾತನಾಡಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೇವೆ ದೊರೆಯತ್ತಿದೆ.ಆದರೆ ಅಲ್ಲಿ ಚೀಟಿ ಮಾಡುವ ಸಿಬ್ಬಂದಿ ಕೊರತೆ ಇದೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಿದ ಶಾಸಕರು, ನಮ್ಮ ಸರ್ಕಾರದಲ್ಲಿ ಶಿಕ್ಷಣ,ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ಖಾಲಿ ಇರುವ ೭೦ ಸಾವಿರ ಹುದ್ದೆಗಳನ್ನು ತುಂಬಲು ಅಧಿಸೂಚನೆ ಹೊರಡಿಸಲಾಗಿದ್ದರೂ ಕೆಲವರು ಮೀಸಲಾತಿ ಗೊಂದಲದ ಕುರಿತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಕಾರಣ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ.ಇದರಲ್ಲಿ ನಮ್ಮ ಸರ್ಕಾರ ರಾಜಕೀಯ ಮಾಡುವುದಿಲ್ಲ.ಸ್ಥಳೀಯ ಆಸ್ಪತ್ರೆಯಲ್ಲಿ ಅನುದಾನದ ಲಭ್ಯತೆ ಮೇಲೆ ಹೊರಗುತ್ತಿಗೆ ಸಿಬ್ಬಂದಿ ನೇಮಕದ ಕುರಿತು ಅವಕಾಶಗಳಿದ್ದಲ್ಲಿ ನೇಮಿಸಿಕೊಳ್ಳಲು ವೈದ್ಯಾಧಿಕಾರಿಗಳಿಗೆ ತಿಳಿಸಿರುವುದಾಗಿ ಹೇಳಿದರು.

ಕೆಎಸ್‌ಡಿಎಲ್ ನಿಗಮದಿಂದ ಶಾಲೆಗಳ ದತ್ತು ಯೋಜನೆ,ವಿಪತ್ತು ಸಂದರ್ಭಗಳಲ್ಲಿ ಅದನ್ನು ತ್ವರಿತವಾಗಿ ತಲುಪಲು ವನ್ಯಜೀವಿಗಳ ದಾಳಿಯಿಂದ ತೊಂದರೆಗೊಳಗಾಗುವವರಿಗಾಗಿ ಜಿಲ್ಲೆಗೊಂದರoತೆ ಅಂಬ್ಯುಲೆನ್ಸ್ ನೀಡಲಾಗುತ್ತಿದೆ.ಬಡವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಉತ್ತರಿಸಿದರು.

ಜಿಲ್ಲಾ ವೈದ್ಯಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಗಣ್ಯ ವರ್ತಕ ಬಿ.ಸಿ.ಮೋಟಗಿ,ಆಡಳಿತ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ,ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಂಗನಾಥ ವೈದ್ಯ,ಕಾಂಗ್ರೆಸ್ ಮುಖಂಡ ಅಬ್ದುಲಗಫೂರ ಮಕಾನದಾರ,ವರ್ತಕರಾದ ರಮೇಶ ಓಸ್ವಾಲ್,ವಾಸುದೇವ ಶಾಸ್ತಿçÃ,ಉದ್ಯಮಿ ಸತೀಶ ಓಸ್ವಾಲ್,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಸರ್ಕಾರಿ ನೌಕರ ಸಂಘದ ಉಪಾಧ್ಯಕ್ಷ ವಿಠ್ಠಲ ಕಿಲಾರಟ್ಟಿ,ಯುವ ಕಾಂಗ್ರೆಸ್ ಮುಖಂಡ ಮೊಹ್ಮದರಫೀಕ ಶಿರೋಳ,ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಸೇರಿದಂತೆ ಹಲವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ