ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ ಚಿರತೆಯೊಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಚಿರತೆ ಈ ಭಾಗದಲ್ಲಿ ಓಡಾಟ ನಡೆಸುತ್ತಿದ್ದು ಗ್ರಾಮದ ಸಿದ್ದಪ್ಪ ಮೇಟಿ ಎಂಬುವ ಹೊಲದ ಬಳಿ ಚಿರತೆ ಕಂಡಿರುವುದನ್ನು ಕಾರಿನಲ್ಲಿ ಕೂತು ಫೋಟೊ ಸೆರೆ ಹಿಡಿದಿರುವ ಮದರಿ ಗ್ರಾಮದ ಯುವ ಮುಖಂಡ ಶಿವು ಕನ್ನೊಳ್ಳಿ ತಿಳಿಸಿದ್ದಾರೆ.
ಚಿರತೆ ಕಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದು ಸಾರ್ವಜನಿಕರ ಮತ್ತು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ.
ರಸ್ತೆ ಪಕ್ಕದಲ್ಲೇ ಚಿರತೆ ಪ್ರತ್ಯಕ್ಷವಾಗಿರುವುದು ರೈತರ ಆತಂಕ ಹೆಚ್ಚಿಸಿದ್ದು ತಾಲ್ಲೂಕು ಆಡಳಿತ ತೀವ್ರ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ
ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ
Latest News
ಟೆನ್ನಿಸ್ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್: ಆರ್.ಎ.ಸಿ.ಸಿ ತಂಡ ಚಾಂಪಿಯನ್-ಒಂದು ಲಕ್ಷ ರೂ.ಬಹುಮಾನ
ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ನಡೆದ ಮುದ್ದೇಬಿಹಾಳ ಟೆನ್ನಿಸ್ ಕ್ರಿಕೇಟ್
ಹುಲ್ಲೂರಿನಲ್ಲಿ ಕಬ್ಬು ಬೆಳೆಗಾರರ ಧರಣಿ: ನಾಳೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನಿರೀಕ್ಷೆ-ಶಾಂತಗೌಡ ಪಾಟೀಲ್
ಮುದ್ದೇಬಿಹಾಳ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿoದ
ನಿಯೋಜಿತ ಕನ್ನಡ ಸಾಹಿತ್ಯಭವನ ನಿರ್ಮಾಣಕ್ಕೆ ಸ್ಥಳ ನಿಗದಿ
ಮುದ್ದೇಬಿಹಾಳ : ಸಾಹಿತ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಪಟ್ಟಣದ ಆಲಮಟ್ಟಿ ರಸ್ತೆಯ ಬಳಿ ಇರುವ ಸಾಯಿಮಂದಿರ
‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’
ಮುದ್ದೇಬಿಹಾಳ : ಇಂದಿನ ಆಧುನಿಕ ಕಾಲದಲ್ಲಿ ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ ಎಂಬುದನ್ನು ನಾವು
ಅ.30 ರಂದು ಗಂಗೂರಿನಲ್ಲಿ ಅಂಕಲಿಮಠದ ಶ್ರೀಗಳ ತುಲಾಭಾರ
ಮುದ್ದೇಬಿಹಾಳ : ದಸರಾ ನಿಮಿತ್ಯವಾಗಿ ತಾಲ್ಲೂಕಿನ ಗಂಗೂರ ಗ್ರಾಮದಲ್ಲಿ ಅ.30 ರಂದು ಬೆಳಗ್ಗೆ 11.30ಕ್ಕೆ ಸಾಮೂಹಿಕ ವಿವಾಹ, 108 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಅಂಕಲಿಮಠದ ಸ್ವಾಮೀಜಿಗಳ ತುಲಾಭಾರ,ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂಕಲಿಮಠದ ವೀರಭದ್ರ ಸ್ವಾಮೀಜಿಗಳು ,ಯರಝರಿ ಮಲ್ಲಾರಲಿಂಗ ಸ್ವಾಮೀಜಿ,ಕುಂಟೋಜಿ ಚೆನ್ನವೀರ ಶಿವಾಚಾರ್ಯರು,ತುರುವಿಹಾಳದ ಅಮರಗುಂಡ ಶಿವಾಚಾರ್ಯರು,ಹೊಸಮಠದ ಅಮರೇಶ್ವರ ದೇವರು,ಸರೂರಿನ ಕಾಡಯ್ಯ ಗುರುವಿನ,ಅಡಿವಯ್ಯ ಹಿರೇಮಠ ದಿವ್ಯ ಸಾನಿಧ್ಯ ವಹಿಸುವರು. ವಿಜಯಪುರ ಸಿಕ್ಯಾಬ್ ಕಾಲೇಜಿನ ಉಪನ್ಯಾಸಕ ಯು.ಎನ್.ಕುಂಟೋಜಿ ಉಪನ್ಯಾಸ ನೀಡುವರು.ಶಾಸಕ ಸಿ.ಎಸ್.ನಾಡಗೌಡ
ಬಿಜೆಪಿ ರಾಜ್ಯ ಕಾರ್ಯದರ್ಶಿಗೆ ಅದ್ದೂರಿ ಸ್ವಾಗತ: ಯತ್ನಾಳ ಘರ್ವಾಪ್ಸಿ : ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ-ಶರಣು ತಳ್ಳಿಕೇರಿ
ಮುದ್ದೇಬಿಹಾಳ : ಬಿಜೆಪಿಗೆ ಮರಳಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಾಪಸ್ ಕರೆತರುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿರುವ ವಿಚಾರ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಹೇಳಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮುದ್ದೇಬಿಹಾಳ ನಗರಕ್ಕೆ ಸೋಮವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ಬಿಜೆಪಿ ಮಂಡಲದ ವತಿಯಿಂದ ನೀಡಲಾದ ಅದ್ದೂರಿ ಸ್ವಾಗತದ ಬಳಿಕ ಅಂಬೇಡ್ಕರ್ ವೃತ್ತದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಯತ್ನಾಳ ಹಾಗೂ







