ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
Join Our Telegram: https://t.me/dcgkannada
ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.
ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ
ಸಾಂಸ್ಕೃತಿಕ ಕಾರ್ಯಕ್ರಮ :
ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.
