Let the project report be the compass for comprehensive development of the district: Minister Santosh Lad

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು.

ಸರಕಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶವಾಗುವಂತೆ ಅಗತ್ಯ ಅನುದಾನ ನೀಡಲು ಕ್ರಮವಹಿಸಲಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಗತ್ಯ ಕಾಮಗಾರಿ, ಕಾರ್ಯಕ್ರಮಗಳನ್ನು ಯೋಜನಾ ವರದಿಯಲ್ಲಿ ಸೇರಿಸಬೇಕು. ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮುನ್ನೋಟವಾಗಬೇಕು ಎಂದು ತಿಳಿಸಿದರು.

ಗ್ರಾಮೀಣ ಅಭಿವೃದ್ಧಿ ಮತ್ತು ನಗರ ಅಭಿವೃದ್ಧಿಗೆ ವಿಸೃತ ವರದಿ ರೂಪಿಸಬೇಕು. ಸ್ಥಳೀಯ ಸಂಸ್ಥೆಗಳಿಂದ ನಿಯಮಾನುಸಾರ ಬೇಡಿಕೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಮೂಲಭೂತ ಸೌಕರ್ಯಗಳ ಹೆಚ್ಚಳ ಜೊತೆಗೆ ಜನರ ಕಲ್ಯಾಣ ಕಾರ್ಯಕ್ರಮಗಳ ಸೇರ್ಪಡೆ ಮಾಡಿ ಉತ್ತಮ ಯೋಜನೆ ರೂಪಿಸಬೇಕು. ಜನರ ಜೀವನಮಟ್ಟ ಸುಧಾರಣೆಗೆ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನಾ ವರದಿಯಲ್ಲಿ ಸೇರಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌, ಜಿಲ್ಲಾಧಿಕಾರಿ ದಿವ್ಯ ಪ್ರಭು, ಶಾಸಕರಾದ ಎನ್. ಎಚ್. ಕೋನರಡ್ಡಿ, ಎಂ. ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಜಿಲ್ಲಾ ಯೋಜನಾ ಸಮಿತಿ ಸದಸಸ್ಯರು, ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ