Let the work of providing benefits to the poor be done: Veerabhadra Swamiji of Ankali Math

ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆಯಲಿ: ಅಂಕಲಿಮಠದ ವೀರಭದ್ರ ಸ್ವಾಮೀಜಿ

ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆಯಲಿ: ಅಂಕಲಿಮಠದ ವೀರಭದ್ರ ಸ್ವಾಮೀಜಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಕರೇಕಲ್ಲ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಿಂದ ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯ ಆಗಬೇಕು ಎಂದು ಅಂಕಲಿಮಠದ ವೀರಭದ್ರ ಸ್ವಾಮೀಜಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದಲ್ಲಿ ನೂತನ ಕರೇಕಲ್ಲ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಮತ್ತು ಡಯಾಗ್ನಸ್ಟಿಕ್ ಸ್ಕ್ಯಾನ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೊದಲಿನ ಆಹಾರ ಪದ್ಧತಿಯಿಂದ ಆರೋಗ್ಯದಿಂದ ಇದ್ದೇವು.ಆಧುನಿಕ ಕಾಲದಲ್ಲಿ ಆಹಾರ ಪದ್ಧತಿಯಿಂದ ಹಲವು ಕಾಯಿಲೆಗಳು ಬರುತ್ತಿವೆ. ಸಿರಿವಂತರಿಗೆ ತುಸು ತುಟ್ಟಿ, ಬಡವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ದೊರೆಯವ ವ್ಯವಸ್ಥೆ ಮಾಡಿ ಎಂದು ಸಲಹೆ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮಾತನಾಡಿ, ಉತ್ತಮ ಜ್ಞಾನ ಹಾಗೂ ಕೌಶಲ್ಯ,ನುರಿತ ಅನುಭವಿಗಳಾಗಿರುವ ವೈದ್ಯರು ಇಲ್ಲಿ ಚಿಕಿತ್ಸೆಗೆ ದೊರೆಯುತ್ತಿರುವುದು ನಮ್ಮ ತಾಲ್ಲೂಕಿನ ಭಾಗ್ಯ ಎಂದರು.

ಇದನ್ನೂ ಓದಿ: ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು, ದೇವರಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ, ವಿಜಯಪುರದ ಬಿದರಿ ಆಸ್ಪತ್ರೆ ವೈದ್ಯ ಡಾ.ಆರ್.ಸಿ.ಬಿದರಿ,ಕರೇಕಲ್ ಪಾಟೀಲ್ ಆಸ್ಪತ್ರೆಯ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್ಲ ಪಾಟೀಲ್, ಡಾ.ಅನುಪಮಾ ಕರೇಕಲ್ ಪಾಟೀಲ್, ಜೀರಲಭಾವಿ ಆನಂದಯ್ಯ ಸ್ವಾಮೀಜಿ, ಪರಮಾನಂದ ಸ್ವಾಮೀಜಿ, ಕೃಷ್ಣಾನಂದ ಶರಣರು, ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ, ಬಾಲಾಜಿ ಶುರ‍್ಸ್ ಚೇರಮನ್ ಹಣಮಂತಗೌಡ್ರು ಪಾಟೀಲ್, ನಿರ್ದೇಶಕರಾದ ರಾಹುಲಗೌಡ ಪಾಟೀಲ್, ಕೆಎಸ್‌ಆರ್‌ಟಿಸಿ ನಿವೃತ್ತ ಡಿಸಿ ವಿ.ಎಸ್.ಪಾಟೀಲ್, ವಿಜಯಪುರ ಹೇಮರಡ್ಡಿ ಮಲ್ಲಮ್ಮ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಪಾಟೀಲ್, ಡಾ.ಶೈಲಜಾ ಬಿದರಿ,ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಿಜಯಪುರದ ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ್, ತಹಶೀಲ್ದಾರ್ ಬಲರಾಮ ಕಟ್ಟಿಮನಿ, ನಿವೃತ್ತ ಡಿಎಚ್‌ಒ ಡಾ.ನೇತಾಜಿ ಬಿರಾದಾರ, ಅನುಗ್ರಹ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಲಿಂಗದಳ್ಳಿ, ಡಾ.ಅನಿಲಕುಮಾರ ಶೇಗುಣಸಿ, ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಡಾ.ಅಜಿತ ಕನಕರಡ್ಡಿ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು