ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು ಶೈಕ್ಷಣಿಕವಾಗಿ ಇನ್ನೂ ಪ್ರಗತಿ ಸಾಧಿಸಬೇಕಾಗಿದೆ ಎಂಬ ಅರಿವಿದೆ.ಸಮಾಜದಲ್ಲಿರುವ ಅತ್ಯಂತ ಕಡು ಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಮುನ್ನಡೆಗೆ ತಮ್ಮಿಂದಾದ ನೆರವು ನೀಡುವುದಾಗಿ ಹೇಳಿದರು.

ದೇವಾಂಗ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲ ಭಾವಿಕಟ್ಟಿ ಮಾತನಾಡಿ, ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿ ಬಡದಾನಿ ಅವರಾಗಿದ್ದು ಸಾಕಷ್ಟು ಕಷ್ಟಕೋಟಲೆಗಳನ್ನು ಎದುರಿಸಿ ಇಂದು ಮುದ್ದೇಬಿಹಾಳದ ಬಿಇಒ ಆಗಿ ಸೇವೆಗೆ ಬಂದಿರುವುದು ನಮಗೆಲ್ಲರಿಗೂ ಹೆಮ್ಮೆ ತರುವ ಸಂಗತಿಯಾಗಿದೆ.ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಾವೆಲ್ಲರೂ ಶಕ್ತಿಮೀರಿ ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಮಾತನಾಡಿ, ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆ ಅತ್ಯಂತ ಜವಾಬ್ದಾರಿಯಾಗಿದೆ.ಎಲ್ಲ ಜಾತಿ ಜನಾಂಗದವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕೆಲಸ ಮಾಡುವ ಶಿಕ್ಷಕರಿಗೆ ಪ್ರೋತ್ಸಾಹ,ಕೆಲಸ ಮಾಡದ ಶಿಕ್ಷಕರಿಗೆ ಕಠಿಣ ಸೂಚನೆಗಳನ್ನು ನೀಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸುವಂತೆ ಸಲಹೆ ಮಾಡಿದರು.

ದೇವಾಂಗ ಸಮಾಜದ ಅಧ್ಯಕ್ಷರಾದ ಚನ್ನಬಸ್ಸು ಗುಡ್ಡದ, ಮುತ್ತಣ್ಣ ಪ್ಯಾಟಿಗೌಡರ, ಮಾತನಾಡಿದರು.ಸಮಾಜದ ಹಿರಿಯರಾದ ಸಿದ್ದಣ್ಣ ಚಿತ್ತರಗಿ,ಬಸವರಾಜ ಅಗಸಬಾಳ,ಈಶ್ವರಪ್ಪ ಹೆಬ್ಬಾಳ,ದೇವಾಂಗ ನೌಕರರ ಸಂಘದ ಸದಸ್ಯರಾದ ಬಿ.ಬಿ.ಕಲ್ಲುಂಡಿ, ಸಿ.ಎಚ್.ಚಿತ್ತರಗಿ, ಎನ್.ಎಸ್.ಚಿತ್ತರಗಿ, ಅನೀಲ್ ಬೇನಾಳ, ಸಂತೋಷ ಹೆಬ್ಬಾಳ,ವೀರೇಶ ಮಾಶೆಟ್ಟಿ,ಶಿವಾನಂದ ಹೆಬ್ಬಾಳ,ರುಕ್ಮಿಣಿ ಶೇಬಿನಕಟ್ಟಿ, ಸುನಂದಾ ಗುಡ್ಡದ,ರಾಘು ಬೇಲಾಳ,ಸುರೇಶ ಮಾಶ್ಯಾಳ,ಐ.ಎಸ್.ಮೋರ್ಖೆ,ಮಹಾಂತೇಶ ಮೋರ್ಖೆ,ವಿಜಯಲಕ್ಷಿö್ಮÃ ಬಡದಾನಿ,ಶಿಕ್ಷಕಿ ಪ್ಯಾಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಅಮೃತಾ ಹೆಬ್ಬಾಳ ಹಾಗೂ ಅರ್ಪಿತಾ ಹೆಬ್ಬಾಳ ಸ್ವಾಗತ ಗೀತೆ ಹಾಡಿದರು.ಕಸ್ತೂರಿ ಗದೆಪ್ಪನವರ ಪ್ರಾರ್ಥಿಸಿದರು.ಸಂತೋಷ ಚಿತ್ತರಗಿ ನಿರೂಪಿಸಿದರು. ಸಿಆರ್‌ಪಿ ಸರಸ್ವತಿ ವಡವಡಗಿ(ಹುಣಶ್ಯಾಳ) ವಂದಿಸಿದರು.

ಶೀಘ್ರ ಪ್ರತಿಭಾ ಪುರಸ್ಕಾರ ಆಯೋಜನೆ:
ದೇವಾಂಗ ಸಮಾಜದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೆಪ್ಟೆಂಬರ್ ತಿಂಗಳಲ್ಲಿ ಆಯೋಜಿಸುವುದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ದೇವಾಂಗ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲ ಭಾವಿಕಟ್ಟಿ ತಿಳಿಸಿದರು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ