Let's build the country together: MLA Vijayananda

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

ಹುನಗುಂದ: ದೇಶದ ಪರಂಪರೆ ಸಿದ್ಧಾಂತದಲ್ಲಿ ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿಯವರು ಹೇಳಿದ ಮಾತಿನಂತೆ ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ ಅವರ ಸಂವಿಧಾನದ ಅಡಿಯಲ್ಲಿ ಭಾರತ ದೇಶವು ಪ್ರಜಾತತ್ವ ಮತ್ತು ಜ್ಯಾತ್ಯಾತೀತ ತಳಹದಿಯಲ್ಲಿ ನಡೆದು, ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿ ಮುನ್ನೆಡಿಸೋಣ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಟಿಸಿಎಚ್ ಕಾಲೇಜು ಆವರಣದಲ್ಲಿ ತಾಲೂಕ ಆಡಳಿತ ಗುರವಾರ ಹಮ್ಮಿಕೊಂಡ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸ್ವತಂತ್ರ ದಿನವು ಪ್ರತಿಯೋಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಅವರು ಇಂದು ಸ್ವಾತಂತ್ರ ಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಹೋರಾಟ, ಬಲಿದಾನವನ್ನು ಸ್ಮರಿಸುವ ದಿನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ತಹಸೀಲ್ದಾರಗ ನಿಂಗಪ್ಪ ಬಿರಾದರ ದ್ವಜಾರೋಹನ ನೇರವೇರಿಸಿ ಮಾತನಾಡಿದ ಅವರು, ಬ್ರೀಟಿಷರ ಕಪಿಮುಷ್ಟಿಯಲ್ಲಿದ್ದ ಭಾರತ ಸ್ವಾತಂತ್ರ್ಯ ಪಡೆಯಲು ಹಲವಾರು ಮಹಾತ್ಮರ ತ್ಯಾಗ ಬಲಿದಾನವೇ ಕಾರಣ ಅವರ ತಂದು ಕೊಟ್ಟ ಸ್ವಾತಂತ್ರ್ಯ ಕ್ಕೆ ಇಂದು 78 ನೇ ವರ್ಷದ ಸ್ವಾತಂತ್ರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲೂಕಾ ಆಡಳಿತದಿಂದ ಸನ್ಮಾನಿಸಲಾಯಿತು.

ಪಿಎಸ್‌ಐ ಚನ್ನಯ್ಯ ದೇವೂರ ನೇತೃತ್ವದಲ್ಲಿ ಪೋಲಿಸರು ಮತ್ತು ವಿವಿಧ ಶಾಲಾ ಕಾಲೇಜು ಎಸ್ ಸಿಸಿ ಮತ್ತು ಎನ್ ಎಸ್ ಎಸ್ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪರೇಡ್ ಮೂಲಕ ಧ್ವಜ ವಂದನೆಯನ್ನು ಸಲ್ಲಿಸಿದರು.

ತಾಲೂಕಾ ಭೂನ್ಯಾಯ ಮಂಡಳಿಯ ಸದಸ್ಯರಾದ ಅಮರೇಶ ನಾಗೂರ, ಮಹಾಂತೇಶ ಅವಾರಿ, ಸಂಗಣ್ಣ ಗಂಜೀಹಾಳ ಪೋಲಿಸ್ ಉಪಾಧೀಕ್ಷಕ ವಿಶ್ವನಾಥರಾವ ಕುಲಕರ್ಣಿ, ಸಿಪಿಐ ಸುನೀಲ ಸವದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ ಕಿಲ್ಲೇದಾರ, ಕ್ಷೇತ್ರ ಸಮನ್ವಯಧಿಕಾರಿ ಸದಾಶಿವ ಗುಡಗುಂಟಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಹಿಂದೂಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ ಹೂಲಗೇರಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣವರ, ಕೆಡಿಪಿ ಸದಸ್ಯರಾದ ವಿಜಯಮಹಾಂತೇಶ ಗದ್ದನಕೇರಿ, ವಿ.ಮ.ಬ್ಯಾಂಕ್ ಅಧ್ಯಕ್ಷ ಶಿವಾನಂದ ಕಂಠಿ, ಪುರಸಭೆಯ ಸದಸ್ಯರಾದ ಚಂದ್ರು ತಳವಾರ, ಬಸವರಾಜ ಗೋಣ್ಣಾಗರ, ಶಾಂತಾ ಮೇಲಿನಮನಿ ಭಾಗ್ಯಶ್ರೀ ರೇವಡಿ,ಕಮಲವ್ವ ಸಂದಿಮನಿ, ಮಾರುತಿ ಹುನಗುಂದ, ರಾಜು ಹುನಗುಂದ, ಗುರಲಿಂಗಪ್ಪ ಇಂಗಳಗೇರಿ, ಮಲ್ಲಪ್ಪ ಅಠರದಾನಿ, ಮಹಾಂತಪ್ಪ ಪಲ್ಲೇದ, ಯಮನಪ್ಪ, ಬೆಣ್ಣಿ, ವೀರುಪಾಕ್ಷಿ ಬೀಳಗಿ,ಚೇತನ ಮುಕ್ಕಣ್ಣನವರ, ವಿನೋದ ಭೋವಿ ಸೇರಿದಂತೆ ಇತರರು ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು