ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಹಗುರವಾದ ಹೇಳಿಕೆ ನೀಡಿರುವ ವಿಜಯಪುರದ ಸಂಸದ ರಮೇಶ ಜಿಗಜಿಣಗಿ ಅವರು ಸಿಎಂ ಸಿದ್ಧರಾಮಯ್ಯನವರ ಕ್ಷಮೆಯಾಚಿಸಬೇಕು ಎಂದು ಗ್ಯಾರಂಟಿ ಸಮಿತಿ ನಾಮನಿರ್ದೇಶಿತ ಸದಸ್ಯ ಬಿ.ಆರ್.ಚಪ್ಪರಬಂದ ಆಗ್ರಹಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಸದ ಜಿಗಜಿಣಗಿ ಅವರಿಗೆ ಕೇಂದ್ರ ಸರ್ಕಾರ ಯಾವುದೇ ಮಾನ್ಯತೆ ನೀಡದೆ ಇರುವುದರಿಂದ ವಿಚಲಿತರಾಗಿ ತಮ್ಮ ಸರಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸುವ ಮನಸ್ಥಿತಿಯಿಂದ ಅವರು ಇನ್ನೂ ಹೊರಬಂದಿಲ್ಲ.
ಇದನ್ನೂ ಓದಿ: Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)
ಅದೇ ಮನಸ್ಥಿತಿಯಿಂದ ಮಾತನಾಡುವ ಸಂದರ್ಭದಲ್ಲಿ ಸಿಎಂ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ರಾಜಕೀಯ ಜೀವನಕ್ಕೆ ಶೋಭೆ ತರುವುದಿಲ್ಲ ಎಂದು ತಿಳಿಸಿದ್ದಾರೆ.