ಶಿವಮೊಗ್ಗ : ರಾಜ್ಯಾದ್ಯಂತ 17,800 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಶಾಲೆಯನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ಸಚಿವೆ ಲಕ್ಷ್ನೀ ಹೆಬ್ಬಾಳ್ಳರ್ ಮಾಹಿತಿ ನೀಡಿದ್ದಾರೆ.
ಭದ್ರಾವತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯು ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದರು.
Join Our Telegram: https://t.me/dcgkannada
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲಾಗಿದೆ. ಇದು ಭಾರತದಲ್ಲೇ ಮೊದಲ ಪ್ರಯತ್ನವಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳಿಗೆ ಕೆಲ ತಿಂಗಳ ಹಿಂದೆಯೇ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.
LKG, UKG ಆರಂಭಕ್ಕೆ ಕೆಲವು ಮಾರ್ಗಸೂಚಿ ತಯಾರಿಸಲಾಗಿದೆ. ಪ್ರಮುಖವಾಗಿ ಎರಡು ಕೊಠಡಿಗಳು, ಶೌಚಾಲಯ ವ್ಯವಸ್ಥೆ ಇರಲೇಬೇಕು. ಆ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಕೈಗೊಂಡು ಶೀಘ್ರವೇ ರಾಜ್ಯದ್ಯಾಂತ ಈ ಯೋಜನೆ ವಿಸ್ತರಿಸಲಾಗುವುದು ಎಂದಿದ್ದಾರೆ.
ಇದಲ್ಲದೇ, ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!
ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೇಸರಿಗಳನ್ನು ಜಿಲ್ಲೆಯಲ್ಲಿ ಆರಂಭಿಸಿದರೆ ಹೇಗೆ ಕಾರ್ಯನಿರ್ವಹಣೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಬಿ. ಎಚ್. ಕೃಷ್ಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಾ. ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
