ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ ಸ್ಥಾನ ನೀಡುವವರೆಗೂ ಪಕ್ಷದ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ಅವರು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಾಹೀನ್ ಶೇಖ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುವ ಮಾತನಾಡುತ್ತಿರುವ ಪಕ್ಷದ ವಿವಿಧ ಹುದ್ದೆಗಳಲ್ಲಿರುವ ಮುಖಂಡರು,ಪದಾಧಿಕಾರಿಗಳಿಗಿoತ ಶಿರೋಳ ಒಂದು ಹೆಜ್ಜೆ ಮುಂದೆ ಇಟ್ಟಿದ್ದು ಪಕ್ಷದ ಹುದ್ದೆಗೆ ರಾಜೀನಾಮೆ ಸಲ್ಲಿಸಿ ನಾಡಗೌಡರ ಪರ ತಮ್ಮ ಅಭಿಮಾನ ಪ್ರದರ್ಶಿಸಿದ್ದಾರೆ.







