ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ ಶಂಕರ ಈ. ಹೆಬ್ಬಾಳ, ಹಿಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಜೆಟ್‌ನಲ್ಲಿ ಮುದ್ದೇಬಿಹಾಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರಾತಿ ಮಾಡಿ ಘೋಷಣೆ ಮಾಡಿದ್ದರು.ಶಾಸಕ ಸಿ.ಎಸ್.ನಾಡಗೌಡರು ಬಸ್ ನಿಲ್ದಾಣದ ಪಕ್ಕದಲ್ಲಿ ಠಾಣೆ ಕಾರ್ಯಾರಂಭಕ್ಕೆ ಸ್ಥಳಾವಕಾಶವನ್ನು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.ಆದರೆ ಈವರೆಗೂ ಠಾಣೆ ಆರಂಭವಾಗಿಲ್ಲ ಎಂದು ಗಮನ ಸೆಳೆದರು.ಇದಕ್ಕೆ ಉತ್ತರಿಸಿದ ಐಜಿಪಿ ಅವರು, ಈ ವಿಷಯ ಸರ್ಕಾರದ ಮಟ್ಟದಲ್ಲಿದ್ದು ಸಂಬAಧಿಸಿದವರೊAದಿಗೆ ಮಾತನಾಡುವುದಾಗಿ ತಿಳಿಸಿದರು.

ಮುದ್ದೇಬಿಹಾಳದ ಬಸವೇಶ್ವರ ವೃತ್ತದಲ್ಲಿ ನಿತ್ಯ ಬೆಳಗ್ಗೆ 8 ರಿಂದ 11ರವರೆಗೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ಅಲ್ಲಿ ಸಾರ್ವಜನಿಕರು,ಬೈಕ್ ಸವಾರರು ದಿನನಿತ್ಯ ಸಂಚರಿಸಲು ಕಷ್ಟಪಡಬೇಕಾಗಿದೆ.ಎಷ್ಟೋ ಬಾರಿ ಪೊಲೀಸರು ಅಲ್ಲಿ ನಿಲ್ಲುವ ಕೂಲಿಕಾರ್ಮಿಕರಿಗೆ ಪಕ್ಕದಲ್ಲಿ ಸರಿದು ನಿಲ್ಲುವಂತೆ ರಸ್ತೆ ಬಿಟ್ಟು ಪಕ್ಕದಲ್ಲಿರುವಂತೆ ತಿಳಿಸಿದರೂ ಯಾವುದೇ ಉಪಯೋಗವಾಗಿಲ್ಲ.ಟ್ರಾಫಿಕ್ ಸಮಸ್ಯೆ ಸರಿಪಡಿಸುವಂತೆ ಸಂಸ್ಥೆಯ ಪದಾಧಿಕಾರಿಗಳು ಮಾಡಿದ ಮನವಿಗೆ ಸ್ಪಂದಿಸಿದ ಐಜಿಪಿ ಅವರು, ಈ ಬಗ್ಗೆ ಎಸ್ಪಿ ಅವರಿಗೆ ತಿಳಿಸಲಾಗುವುದು.ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ,ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ, ಸಿಪಿಐ ಮೊಹ್ಮದಫಸಿವುದ್ದೀನ್,ಜನಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ವಾಯ್.ದಫೇದಾರ,ಖಜಾಂಚಿ ಹಣಮಂತ ನಲವಡೆ,ಪತ್ರಕರ್ತ ಅನೀಲಕುಮಾರ ತೇಲಂಗಿ,ಮುಖAಡ ಶ್ರೀಶೈಲ ಮೇಟಿ,ಅಪ್ಪು ನಾಡಗೌಡ ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ