ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ ಶಿಕ್ಷಕರು ಡೊನೇಷನ್ ಕೊಟ್ಟು ಶಿಕ್ಷಕರಾದವರಲ್ಲ.ಸರಕಾರಿ ಶಾಲೆಯ ಶಿಕ್ಷಕರು ಒಂದು ಬೈಗುಳ ಹೆಚ್ಚಾದರೂ ಪಾಲಕರು ಶಾಲೆಗೆ ಬಂದು ಶಿಕ್ಷಕರನ್ನು ಪ್ರಶ್ನಿಸುವ ಮನೋಭಾವ ಬದಲಾಗಬೇಕಿದೆ.ಶಿಕ್ಷಕರ ಛಡಿ ಏಟು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ ಎಂದು ಹೇಳಿದರು.

ಬಟ್ಟೆ,ಊಟ,ಪುಸ್ತಕ ಎಲ್ಲವನ್ನೂ ಕೊಟ್ಟಾಗಲೂ ಸರ್ಕಾರಿ ಶಾಲೆಗಳಿಗೆ ಹುಡುಗರು ಬರುತ್ತಿಲ್ಲ.ಸರ್ಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ಸಿಗುವುದಿಲ್ಲ ಎಂಬುದು ಸಾಮಾನ್ಯವಾಗಿ ಬೆಳೆದು ಬಂದಿರುವ ಸ್ಥಿತಿಯಾಗಿದೆ.ಆದರೆ ಸರ್ಕಾರಿ ಶಾಲೆಗೆ ಆಯ್ಕೆಯಾಗದವರು ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿರುತ್ತಾರೆ.ಆದರೆ ಜಾಣರನ್ನು ಜಾಣರನ್ನಾಗಿ ಮಾಡುವುದು ಮುಖ್ಯವಲ್ಲ ಸರಾಸರಿ ಬುದ್ದಿಮತ್ತೆ ಹೊಂದಿರುವ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು.ತಾಲ್ಲೂಕಿನಲ್ಲಿ 230 ಶಾಲೆ ರಿಪೇರಿ ಮಾಡಬೇಕು ಎಂದು ಹೇಳಿದರು.

ಗುರುಭವನ ನಿರ್ಮಾಣಕ್ಕೆ 25 ಲಕ್ಷ ರೂಪಾಯಿ ಅನುದಾನ ಒದಗಿಸುವ ಭರವಸೆ ನೀಡಿದ ಶಾಸಕರು,ನಿಮ್ಮ ಶಿಕ್ಷಕರ ಸಂಘದ ಚುನಾವಣೆ ಬಂದಾಗ ರಾಜಕಾರಣ ಮಾಡಿ.ಆದರೆ ದಿನನಿತ್ಯ ರಾಜಕಾರಣ ಮಾಡಬೇಡಿ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖ ನುಗ್ಗಲಿ,ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು,ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ,ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ,ಹೇಮರಡ್ಡಿ ಮಲ್ಲಮ್ಮ ಕಲ್ಯಾಣಮಂಟಪದ ಅಧ್ಯಕ್ಷ ಸುರೇಶಗೌಡ ಪಾಟೀಲ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸನಗೌಡ ಮುದ್ನೂರ,ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ಬಿ.ಟಿ.ವಜ್ಜಲ,ನಿಡಗುಂದಿ ತಾಲ್ಲೂಕಿನ ಅಧ್ಯಕ್ಷ ಸಲೀಮ , ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ತಾಪಂ ಇಒ ಸಂಗನಗೌಡ ಬಿರಾದಾರ,ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ ,ಶಿಕ್ಷಣ ಸಂಯೋಜಕ ಎಂ.ಕೆ.ಬಾಗವಾನ,ಎA.ಎಸ್.ಕವಡಿಮಟ್ಟಿ,ಶ್ರೀಶೈಲ ಭಾವಿಕಟ್ಟಿ,ಎಂ.ಜಿ.ವಾಲಿ,ಸರಸ್ವತಿ ವಡವಡಗಿ, ಮೊದಲಾದವರು ಇದ್ದರು.

ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಸಿದ್ದನಗೌಡ ಬಿಜ್ಜೂರ ಹಾಗೂ ಹೇಮಾ ಬಿರಾದಾರ ನಿರೂಪಿಸಿದರು.ಎಂ.ಎo.ಬೆಳಗಲ್ ಸ್ವಾಗತಿಸಿದರು.ನಿಡಗುಂದಿ,ಮುದ್ದೇಬಿಹಾಳ,ತಾಳಿಕೋಟಿ ತಾಲ್ಲೂಕಿನ ಶಿಕ್ಷಕರು ಇದ್ದರು.ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು,ಎಸ್.ಎಸ್.ಎಲ್.ಸಿಯಲ್ಲಿ ಶೇ.100ರಷ್ಟು ಸಾಧನೆ ತೋರಿದ ಶಾಲೆಗಳ ಶಿಕ್ಷಕರನ್ನು ಸನ್ಮಾನಿಸಲಾಯಿತು.

Latest News

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು ಅಂತಹ ತಾಂತ್ರಿಕ ನೈಪುಣ್ಯತೆಯ ಕಾಲೇಜು ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಇರಲಿಲ್ಲ.ಇದೀಗ ಶಾಸಕ ಸಿ.ಎಸ್.ನಾಡಗೌಡ ಅವರು ವಿಶೇಷ ಮುತುವರ್ಜಿ ವಹಿಸಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರವನ್ನು ತಂದಿದ್ದು ಯುವಜನರು,ಮಧ್ಯಮ ವರ್ಗದವರಿಗೆ ಈ ಕಾಲೇಜು ಹೊಸ ಭರವಸೆಯನ್ನು ಹುಟ್ಟು ಹಾಕಿದೆ. ಪಟ್ಟಣದ ಪುರಸಭೆ,ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್ ಹಾಗೂ ಕೆ.ಎಸ್.ಡಿ.ಎಲ್. (ಸಿ.ಎಸ್.ಆರ್) ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಸೆ.3

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮೇಲೆ ಹಣ ದುರುಪಯೋಗದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅವರಿಗೆ ಸರ್ಕಾರ ಕೊಟ್ಟಿರುವ ಸ್ಥಾನಮಾನಗಳನ್ನು ಹಿಂಪಡೆದುಕೊoಡು ತನಿಖೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲ್ಲೂಕು ಘಟಕದಿಂದ ರಾಜ್ಯಪಾಲರು,ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಪದಾಧಿಕಾರಿಗಳು, ಶಿರಸ್ತೇದಾರ ಎಂ.ಎ.ಬಾಗೇವಾಡಿ